ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನ: ಅರ್ಜಿ ಆಹ್ವಾನ
Update: 2024-11-14 14:28 GMT
ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್ಡಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಡಿ. ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿಸೆಂಬರ್ 5 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಳಿಗಾಗಿ - https://bcwd.karnataka.gov.in/- ಇಲಾಖೆ ವೆಬ್ಸೈಟ್ ಅಥವಾ ಸಹಾಯವಾಣಿ ಸಂಖ್ಯೆ: 8050770004 ಅನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.