ಹೊಯ್ಸಳ, ಕೆಳದಿ ಚೆನ್ನಮ್ಮ ಪ್ರಶಸ್ತಿ: ಅರ್ಜಿ ಆಹ್ವಾನ

Update: 2024-11-15 14:40 GMT

ಉಡುಪಿ, ನ.15: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಾವೀನ್ಯತೆ, ತಾರ್ಕಿಕ ಸಾಧನೆ, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವ 5 ವರ್ಷದಿಂದ 18 ವರ್ಷದೊಳಗಿನ ಮಕ್ಕಳಿಂದ ಜಿಲ್ಲಾ ಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಸೂಕ್ತ ದಾಖಲೆಗಳೊಂದಿಗೆ ಪ್ರಸ್ತಾವನೆ ಸಲ್ಲಿಸಲು ಡಿಸೆಂಬರ್ 2 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 204, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574978ನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News