ಸ್ವಯಂ ರಕ್ಷಣೆಗಾಗಿ ಕರಾಟೆ ಅಭ್ಯಾಸ ಇಂದಿನ ಅಗತ್ಯ: ಪುತ್ತಿಗೆ ಶ್ರೀ

Update: 2024-11-16 13:10 GMT

ಉಡುಪಿ: ನಮ್ಮನ್ನು ನಾವೇ ರಕ್ಷಣೆ ಮಾಡಿಕೊಳ್ಳುವ ಕಲೆ ಕರಾಟೆ. ಈ ಕಲೆಯನ್ನು ನಿರಂತರ ಅಭ್ಯಾಸ ಮಾಡುವುದು ಇಂದಿನ ಅಗತ್ಯತೆ ಎಂದು ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಉಡುಪಿ ಪರ್ಯಾಯ ಪುತ್ತಿಗೆ ಮಠ, ಶ್ರೀಕೃಷ್ಣ ಮಠದ ಆಶ್ರಯದಲ್ಲಿ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಕರ್ನಾಟಕ ನೇತೃತ್ವದಲ್ಲಿ ನ.16ರಂದು ಶ್ರೀಕೃಷ್ಣ ಮಠದ ಮಧ್ವಾಂಗಣದಲ್ಲಿ ನಡೆದ 4ನೇ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧಾ ಕೂಟವನ್ನು ಉದ್ಘಾಟಿಸಿ ಪ್ರಶಸ್ತಿ ಫಲಕಗಳನ್ನು ಅನಾವರಣಗೊಳಿಸಿ ಅವರು ಮಾತನಾಡುತಿದ್ದರು.

ಪುತ್ತಿಗೆ ಕಿರಿಯ ಯತಿ ಸುಶ್ರೀಂದ್ರ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿ ದರು. ಅಂಬಲಪಾಡಿ ಶ್ರೀಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ.ನಿ.ಬೀ.ವಿಜಯ ಬಲ್ಲಾಳ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಾದ ಪ್ರಭಾಕರ ಕುಂದರ್ ಮಲ್ಪೆ, ಗೋಪಾಲ್ ಸಿ.ಬಂಗೇರ, ವಿಜಯಾ ಜಿ.ಬಂಗೇರ, ಈಶ್ವರ್ ಮಲ್ಪೆ, ಶಿವಕುಮಾರ್ ಅಂಬಲಪಾಡಿ, ಹರಿಶ್ಚಂದ್ರ ಅಂಬಲಪಾಡಿ ಅವರನ್ನು ಸನ್ಮಾನಿಸಲಾಯಿತು.

ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಬುಡೋಕಾನ್ ಕರಾಟೆ ಅಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಅಧ್ಯಕ್ಷ ವಾಮನ್ ಪಾಲನ್, ಸೌತ್ ಏಷ್ಯಾ ಚೀಫ್ ಶೋಟೋಕಾನ್ ವರ್ಲ್ಡ್ ಕರಾಟೆ ರಾಜ್ಯ ಉಪಾಧ್ಯಕ್ಷ ವಿನೋದ್ ಶಿವಮೊಗ್ಗ, ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ನಿಕಟಪೂರ್ವ ಅಧ್ಯಕ್ಷೆ ವೀಣಾ ಎಸ್.ಶೆಟ್ಟಿ, ಪ್ರಮುಖರಾದ ಈಶ್ವರ್ ಕಟೀಲ್, ರೋಹಿತಾಕ್ಷ ಉದ್ಯಾವರ, ರವಿ ಸಾಲ್ಯಾನ್, ನರಸಿಂಹ ಸ್ವಾಮಿ, ಕಿರಣ್ ಕುಂದಾಪುರ, ಸುಂದರಂ, ರಘುರಾಜ್ ಪಣಿಯಾಡಿ, ಅಶೋಕ್ ಕುಲಾಲ್, ಹರೀಶ್ ಬೆಳ್ಮಣ್, ಹರ್ಷ ಭಾಗವತ್ ಮೊದಲಾದವರು ಉಪಸ್ಥಿತರಿದ್ದರು.

ಬುಡೋಕಾನ್ ಕರಾಟೆ ಅಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಗೌರವ ಸಲಹೆಗಾರ ಪ್ರಕಾಶ್ ಮಲ್ಪೆಪ್ರಾಸ್ತಾವಿಕವಾಗಿ ಮಾತನಾಡಿದರು. ಬಿಕೆಎಸ್‌ಎ ಉಪಾಧ್ಯಕ್ಷೆ ಅಮೃತಾ ಉಪಾಧ್ಯ ಸ್ವಾಗತಿಸಿದರು. ಪ್ರತೀಕ್ಷಾ ಕುಲಕರ್ಣಿ ಕಾರ್ಯಕ್ರಮ ನಿರೂಪಿಸಿ, ಬಿಕೆಎಸ್‌ಎ ಕಾರ್ಯದರ್ಶಿ ಮೇಘ ವಂದಿಸಿದರು.



Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News