ಮಾದಕ ವ್ಯಸನಗಳ ವಿರುದ್ಧ ಜಾಗೃತಿ ಅಭಿಯಾನ ’ವಾಗ್ದಾನ’

Update: 2024-11-16 13:13 GMT

ಬ್ರಹ್ಮಾವರ: ಬಾರ್ಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಐಕ್ಯೂಎಸಿ, ಸಮಾಜಕಾರ್ಯ ವೇದಿಕೆ, ಆಂಟಿ ಡ್ರಗ್ ಸೆಲ್ ಮತ್ತು ಜನಸೇವಾ ಟ್ರಸ್ಟ್ ಮೂಡುಗಿಳಿಯಾರು ಮತ್ತು ಟೀಮ್ ಅಭಿಮತ ಸಂಯುಕ್ತ ಆಶ್ರಯದಲ್ಲಿ ಮಾದಕ ವ್ಯಸನಗಳ ವಿರುದ್ಧ ಜಾಗೃತಿ ಅಭಿಯಾನ ’ವಾಗ್ದಾನ’ ಕಾರ್ಯಕ್ರಮ ನ.೧೩ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಮನೋವೈದ್ಯ ಡಾ.ಪಿ.ವಿ.ಭಂಡಾರಿ ‘ಆಧುನಿಕ ದಿನಮಾನಗಳ ವ್ಯಸನಗಳ’ ಎಂಬ ವಿಷಯದ ಕುರಿತು ಮಾತನಾಡಿದರು. ಮಾದಕ ಪದಾರ್ಥಗಳಿಂದ ದೇಹದ ಮೇಲೆ ಮತ್ತು ಸಮಾಜದ ಮೇಲಾಗುವ ಹಾನಿಗಳನ್ನು ಮನಮುಟ್ಟುವಂತೆ ವಿವರಿಸಿದ ಅವರು, ಮಾದಕ ವ್ಯಸನಗಳಿಗೆ ಬಲಿಯಾಗದಂತೆ ಕರೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ.ಭಾಸ್ಕರ ಶೆಟ್ಟಿ ಸಳ್ವಾಡಿ ಮಾತನಾಡಿ, ದೇಶದ ಭವಿಷ್ಯದ ಹಿತ ದೃಷ್ಟಿಯಿಂದ ಯುವಜನರು ಆರೋಗ್ಯ ವಂತ ಹವ್ಯಾಸಗಳನ್ನು ಮೈಗೂಡಿಸಿಕೊಂಡು ಸಮಾಜಕ್ಕೆ ತಮ್ಮದೇ ಆದಂತಹ ಕೊಡುಗೆಗಳನ್ನು ನೀಡಬೇಕು ಎಂದು ಕರೆ ನೀಡಿದರು.

ಜನಸೇವಾ ಟ್ರಸ್ಟ್‌ನ ವಸಂತ ಗಿಳಿಯಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಟೀಮ್ ಅಭಿಮತ ಸಹ ಸಂಚಾಲಕ ಮತ್ತು ರಾಷ್ಟ್ರೀಯ ವೇಟ್ ಲಿಫ್ಟರ್ ಶರತ್ ಕುಮಾರ್ ಶೆಟ್ಟಿ ವಡ್ಡರ್ಸೆ ಪ್ರತಿಜ್ಞೆ ಬೋಧಿಸಿದರು.

ಜನಸೇವಾ ಟ್ರಸ್ಟ್ ಕೋರ್ ಕಮಿಟಿ ಮುಖ್ಯಸ್ಥ ಉದಯ ಶೆಟ್ಟಿ ಪಡುಕರೆ, ಐಕ್ಯೂಎಸಿ ಸಂಚಾಲಕಿ ವಿದ್ಯಾ ಪಿ., ಸಮಾಜ ಕಾರ್ಯ ವಿಭಾಗ ಮುಖ್ಯಸ್ಥೆ ಡಾ. ಹೇಮಾ ಎಸ್. ಕೊಡದ್, ಆಂಟಿ ಡ್ರಗ್ ಸೆಲ್ ಸಂಚಾಲಕ ಪಾಪಣ್ಣ ಎನ್.ಎ., ಸಮಾಜ ಕಾರ್ಯ ವೇದಿಕೆ ಸಂಚಾಲಕ ಸತೀಶ್ ಕುಮಾರ್ ಬಿ.ಡಿ., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಹರೀಶ್ ಸಿ.ಕೆ. ಮೊದಲಾದ ವರು ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ವಿಘ್ನೇಶ್ ಸ್ವಾಗತಿಸಿದರು. ಪ್ರಕಾಶ್ ವಂದಿಸಿದರು. ಪ್ರತಿಮಾ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರು. ಮಹಿಮಾ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News