ಉಡುಪಿ ಜಿಲ್ಲಾ ಮಟ್ಟದ ಕವಿಗೋಷ್ಠಿಗೆ ಕವಿತೆಗಳ ಆಹ್ವಾನ
ಉಡುಪಿ, ನ.16: ಕರ್ನಾಟಕ ಯುವ ಬರಹಗಾರರ ಬಳಗದ ಉಡುಪಿ ಜಿಲ್ಲಾ ಘಟಕದ ವತಿಯಿಂದ ಡಿಸೆಂಬರ್ ತಿಂಗಳಿನಲ್ಲಿ ವಿಶ್ವ ಮಾನವ ರಾಷ್ಟ್ರಕವಿ ಕುವೆಂಪು ಸಂಸ್ಮರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಜಿಲ್ಲಾ ಮಟ್ಟದ ಪ್ರಥಮ ಕವಿಗೋಷ್ಠಿಗೆ ಜಿಲ್ಲೆಯ ಆಸಕ್ತ ಕವಿ-ಕವಯಿತ್ರಿಯರಿಂದ ಕವನಗಳನ್ನು ಆಹ್ವಾನಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಜಿ.ಎಸ್.ಕಿರಣ್ ಕುಮಾರ್ ತಿಳಿಸಿದ್ದಾರೆ.
ಈ ಕವಿಗೋಷ್ಠಿಯಲ್ಲಿ ಭಾಗವಹಿಸಲು ಇಚ್ಛಿಸುವ ಜಿಲ್ಲೆಯ ಯಾವುದೇ ವಯೋಮಾನದ ಆಸಕ್ತ ಕವಿ-ಕವಯಿತ್ರಿಯರು ಯಾವುದೇ ವಸ್ತು ವಿಷಯ ಕುರಿತು ರಚಿಸಿದ, ತಮ್ಮ ಸ್ವ-ರಚಿತ 20 ಸಾಲುಗಳ ಮಿತಿಯೊಳಗಿನ ಎರಡು ಕವಿತೆಗಳು/ಗಜಲ್‌ಗಳನ್ನು ಅಥವಾ 6 ಸಾಲಿನ ಮಿತಿಯೊಳಗಿನ ಆರು ಚುಟುಕು / ಹನಿಗವಿತೆಗಳನ್ನು ಕಳುಹಿಸಿಕೊಡಬೇಕು. ಆಯ್ಕೆಯಾದ ಕವಿತೆಗಳ ಕವಿಗಳಿಗೆ ಜಿಲ್ಲಾ ಮಟ್ಟದ ಕವಿಗೋಷ್ಠಿಯಲ್ಲಿ ಕವನ ವಾಚಿಸಲು ಅವಕಾಶ ಮಾಡಿಕೊಡಲಾಗು ವುದು. ಜೊತೆಗೆ ಭಾಗವಹಿಸುವ ಎಲ್ಲಾ ಕವಿಗಳಿಗೂ ಬಳಗದ ಉದ್ಘಾಟನಾ ಸಮಾರಂಭದಲ್ಲಿ ಪ್ರಶಸ್ತಿ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಲಾಗುವುದು.
ಆಸಕ್ತ ಕವಿಗಳು ದಿನಾಂಕ ನ.30ರೊಳಗೆ ತಲುಪುವಂತೆ ಸ್ವರಚಿತ ಎರಡು ಕವಿತೆಗಳನ್ನು ತಮ್ಮ ಸಂಕ್ಷಿಪ್ತ ಪರಿಚಯ ದೊಂದಿಗೆ ಜಿ.ಎಸ್.ಕಿರಣ್ ಕುಮಾರ್, ಜಿಲ್ಲಾಧ್ಯಕ್ಷರು, ಕರ್ನಾಟಕ ಯುವ ಬರಹಗಾರರ ಬಳಗ, ಉಡುಪಿ, ಅನ್ನಪೂರ್ಣೇಶ್ವರಿ ನಿಲಯ, ಬೊಬ್ಬರ್ಯ ದೈವಸ್ಥಾನ ರಸ್ತೆ, ಉಪ್ಪಿನಕುದ್ರು, ಕುಂದಾಪುರ ತಾಲ್ಲೂಕು - 576230 ಈ ವಿಳಾಸಕ್ಕೆ ಕಳುಹಿಸ ಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9591217410/8152055770 ಸಂಪರ್ಕಿಸಬಹುದು ಎಂದು ಕಿರಣ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದದಾರೆ.