ಅಮೂರ್ತದಿಂದ ಮೂರ್ತದೆಡೆಗೆ ಕೊಂಡೊಯ್ಯುವುದೇ ಕವನ: ಡಾ.ಮಾಧವಿ ಭಂಡಾರಿ

Update: 2024-11-17 12:45 GMT

ಉಡುಪಿ, ನ.17: ಅಮೂರ್ತದಿಂದ ಮೂರ್ತದೆಡೆಗೆ ನಮ್ಮನ್ನು ಕೊಂಡೊಯ್ಯುವುದೇ ಕವನ. ಕವಿಗಳು ತಮ್ಮ ಸ್ವರಚಿತ ಕವನ ವಾಚಿಸುವಾಗ ಶೋತ್ರಗಳು ತಾವೇ ಅನುಭವಿಸಿದಂತೆ ಭಾವನೆ ಬಂದಾಗ ಕವನ ವಾಚನ ಸಾರ್ಥಕತೆಯನ್ನು ಕಾಣುತ್ತದೆ ಎಂದು ಸಾಹಿತಿ, ಅನುವಾದಕಿ, ನಿವೃತ್ತ ಪ್ರಾಧ್ಯಾಪಕಿ ಡಾ.ಮಾಧವಿ ಭಂಡಾರಿ ಹೇಳಿದ್ದಾರೆ.

ಅಜ್ಜರಕಾಡಿನ ವಿದ್ಯಾವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆ, ನಗರ ಕೇಂದ್ರ ಗ್ರಂಥಾಲಯ ಉಡುಪಿ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಸಮಾರಂಭದ ಅಂಗವಾಗಿ ನಡೆದ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯ ಅಧಿಕಾರಿ ನಳಿನಿ ಜಿ.ಐ. ಗ್ರಂಥಾಲಯ ಸಪ್ತಾಹ ಕಾರ್ಯಕ್ರಮಗಳ ಮಾಹಿತಿಗಳನ್ನು ನೀಡಿದರು.

ಕವಿಗೋಷ್ಠಿಯಲ್ಲಿ ನಾರಾಯಣ ಮಡಿ, ಪೂರ್ಣಿಮಾ ಜನಾರ್ದನ್ ಕೊಡವೂರು, ವಾಸಂತಿ ಅಂಬಲಪಾಡಿ, ರಂಜಿನಿ ವಸಂತ್, ಉಮೇಶ್ ಆಚಾರ್ಯ, ಅಂಬಿಕಾ ಉಡುಪಿ, ಸಂಜೀವ ನಾಯಕ್, ರಾಜೇಶ್ ಭಟ್ ಪಣಿಯಾಡಿ, ರಮ್ಯಾ ರಾಕೇಶ್ ಮಲ್ಪೆ ಭಾಗವಹಿಸಿದ್ದರು.

ಕನ್ನಡ ಸಾಹಿತ್ಯ ಪರಿಷತ್ತಿನ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್. ಪಿ. ಪ್ರಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು ನಿರೂಪಿಸಿ, ಸತೀಶ್ ಕೊಡವೂರು ವಂದಿಸಿದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News