ಸುಪ್ರೀಂ, ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

Update: 2024-11-17 13:56 GMT

ಉಡುಪಿ, ನ.17: ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ 125ನೇ ವರ್ಷದ ಶತಮಾನೋತ್ತರ ರಜತ ಮಹೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಮೂರ್ತಿಗಳು ರವಿವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅರವಿಂದ್ ಕುಮಾರ್, ಹೈಕೋರ್ಟ್ ನ್ಯಾಯಮೂರ್ತಿಗಳಾದ ಎನ್.ವಿ.ಅಂಜಾರಿಯಾ, ನ್ಯಾ.ಎಂ.ಜಿ.ಉಮಾ, ನ್ಯಾ.ರಾಮಚಂದ್ರ ಡಿ.ಹುದ್ದಾಾರ್, ನ್ಯಾ.ಟಿ.ವೆಂಕಟೇಶ್ ನಾಯ್ಕ್, ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್.ಭರತ್ ಕುಮಾರ್, ಅಡ್ವಕೇಟ್ ಜನರಲ್ ಶಶಿಕಿರಣ್ ಎಸ್.ಶೆಟ್ಟಿ, ಉಡುಪಿ ಜಿಲ್ಲಾ ಸತ್ರ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣನವರ್ ದೇವರ ದರ್ಶನ ಮಾಡಿದರು.

ಬಳಿಕ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಂದ ಅನುಗ್ರಹ ಮಂತ್ರಾಕ್ಷತೆ ಹಾಗೂ ಕೋಟಿ ಗೀತಾಲೇಖನ ಯಜ್ಞದ ದೀಕ್ಷೆಯನ್ನು ಪಡೆದುಕೊಂಡರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News