ಪರೀಕದಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ

Update: 2024-11-18 17:25 GMT

ಉಡುಪಿ: ಪರ್ಕಳ ಸಮೀಪದ ಪರೀಕದಲ್ಲಿರುವ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ‘ಸೌಖ್ಯವನ’ ದಲ್ಲಿ ಸೋಮವಾರ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆಯನ್ನು ಆಸ್ಪತ್ರೆಯ ಕ್ಷೇಮಹಾಲ್‌ನಲ್ಲಿ ಆಚರಿಸಲಾಯಿತು.

ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರು ಕಾರ್ಯಕ್ರಮ ವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾನಾಡಿ, ಪ್ರಕೃತಿ ಮೂಲದಿಂದ ನಮ್ಮನ್ನು ಉಪಚರಿಸುವ ಹಾಗೂ ಜೀವನ ಶೈಲಿಗೆ ಒತ್ತು ಕೊಡುವ ಔಷಧಿರಹಿತ ವೈದ್ಯಕೀಯ ಪದ್ಧತಿಯಾದ ಪ್ರಕೃತಿ ಚಿಕಿತ್ಸೆಗೆ ಹೆಚ್ಚೆಚ್ಚು ಮನ್ನಣೆ ನೀಡಬೇಕಾಗಿದೆ ಎಂದರು.

ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿ ಬಿ.ಸೀತಾರಾಮ ತೋಳ್ಪಾಡಿತ್ತಾಯ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ತಪಸ್ಯ ಮಿತ್ರ ಫೌಂಡೇಶನ್‌ನ ಸಹ ಸಂಸ್ಥಾಪಕ ಡಾ.ದ್ವಾರಕ ನಾಥ್, ವೃತ್ತಿ ಬದುಕಿನ ತಮ್ಮ ಕೆಲವು ಅನುಭವಗಳನ್ನು ಹೊಂಚಿಕೊಂಡರಲ್ಲದೇ, ಪ್ರಕೃತಿದತ್ತವಾದ ಪಥ್ಯಾಹಾರ ಸೇವನೆಯ ಕುರಿತಂತೆ ವಿಶೇಷ ಮಾಹಿತಿಯನ್ನು ನೀಡಿದರು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಹಾಗೂ ಡಾ.ದ್ವಾರಕಾನಾಥ್ ಇವರನ್ನು ಸಂಸ್ಥೆಯ ವತಿಯಿಂದ ಕಾರ್ಯದರ್ಶಿಯವರು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಗೋಪಾಲ ಪೂಜಾರಿ ಅವರು ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ ಯ ಹಿನ್ನಲೆ ಮತ್ತು ಮಹತ್ವದ ಬಗ್ಗೆ ಮಾಹಿತಿ ನೀಡಿದರು.

ಡಾ.ಅಜಿತ್ ನೇತೃತ್ವದಲ್ಲಿ ಕಿರಿಯ ವೈದ್ಯರ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಯೋಗ ಪ್ರಾತ್ಯಕ್ಷಿತೆ ನಡೆ ಯಿತು. ಸ್ಥಾನಿಕ ವೈದ್ಯಾಧಿಕಾರಿ ಡಾ.ಶೋಭಿತ್ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಡಾ. ಪೂಜಾ ಜಿ.ಎಸ್. ಕಾರ್ಯಕ್ರಮ ನಿರೂಪಿಸಿ ಡಾ.ಅನ್ವಿತ ಯು. ವಂದಿಸಿದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News