ಕಾರ್ಕಳ ವೆಂಕಟರಮಣ ದೇವಸ್ಥಾನದ ಲಕ್ಷದೀಪೋತ್ಸವ: ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ

Update: 2024-11-19 17:38 GMT

ಸಾಂದರ್ಭಿಕ ಚಿತ್ರ

ಉಡುಪಿ, ನ.19: ಕಾರ್ಕಳದ ಶ್ರೀವೆಂಕಟರಮಣ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ ನಿಮಿತ್ತ ನಡೆಯುವ ಕಾರ್ಯಕ್ರಮದ ಪ್ರಯುಕ್ತ ನವೆಂಬರ್ 19ರಿಂದ 21ರವರೆಗೆ ಮೂರು ಮಾರ್ಗದಿಂದ ಸ್ಟೇಟ್ ಬ್ಯಾಂಕ್ ಜಂಕ್ಷನ್‌ವರೆಗೆ ಈ ಕೆಳಗಿನಂತೆ ತಾತ್ಕಾಲಿಕ ಪರ್ಯಾಯ ಸಂಚಾರ ವ್ಯವಸ್ಥೆ ಕಲ್ಪಿಸಿ, ಜಿಲ್ಲಾ ದಂಡಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ನ.20ರಂದು ಲಕ್ಷದೀಪೋತ್ಸವ ವನಭೋಜನ ಉತ್ಸವ ಇರುವುದರಿಂದ ಅಂದು ಬೆಳಗ್ಗೆ 10ರಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಹಾಗೂ ನ. 21ರಂದು ಓಕುಳಿ ಹಾಗೂ ಪಲ್ಲಕ್ಕಿ ಉತ್ಸವ ಇರುವುದರಿಂದ ಅಂದು ಸಂಜೆ 4 ಗಂಟೆಯಿಂದ ಮರುದಿನ ಬೆಳಗ್ಗೆ 4 ಗಂಟೆಯವರೆಗೆ ಘನವಾಹನಗಳು ಬಂಗ್ಲೆಗುಡ್ಡೆಯಿಂದ ಹಿರಿಯಂಗಡಿ, ಪುಲ್ಕೇರಿ ಮಾರ್ಗವಾಗಿ ಸಂಚರಿಸ ಬೇಕು. ಬಸ್‌ಗಳು ಕಾರ್ಕಳದಿಂದ ಜೋಡುರಸ್ತೆ ಕಡೆಗೆ ಹಾಗೂ ಜೋಡುರಸ್ತೆಯಿಂದ ಕಾರ್ಕಳ ಕಡೆಗೆ ಸಂಚರಿಸುವ ಬಸ್‌ಗಳು ತಾಲೂಕು ಜಂಕ್ಷನ್‌ನಿಂದ ಕಲ್ಲೊಟ್ಟೆ ಮಾರ್ಕೆಟ್ ಮಾರ್ಗವಾಗಿ ಬಸ್ ನಿಲ್ದಾಣ ಪ್ರವೇಶಿಸಬೇಕು. ಸ್ಟೇಟ್ ಬ್ಯಾಂಕ್ ಜಂಕ್ಷನ್‌ ನಿಂದ ಗಾಂಧಿ ಮೈದಾನವಾಗಿ ಕಾಮಧೇನು ಹೋಟೆಲ್ ಜಂಕ್ಷನ್ ವರೆಗಿನ ಮಾರ್ಗದಲ್ಲಿ ದ್ವಿಚಕ್ರ ಹಾಗೂ ಲಘು ವಾಹನಗಳು ಸಂಚರಿಸಬೇಕು.

ಈ ಅಧಿಸೂಚನೆಯನ್ನು ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮ 1989 ರ ನಿಯಮ 221 5(ಎ) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಹೊರಡಿಸ ಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News