ಯುವತಿ ಆತ್ಮಹತ್ಯೆ
Update: 2024-11-19 17:45 GMT
ಕಾಪು, ನ.19: ಮಣಿಪುರದ ಬೆಳ್ಳೆ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಮೂರು ವರ್ಷಗಳಿಂದ ಸಹಾಯಕಿಯಾಗಿ ಕೆಲಸ ಮಾಡುತಿದ್ದ ಕೀರ್ತನಾ(26) ಎಂಬ ಯುವತಿ ನ.10ರಂದು ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾದವರು ಚಿಕಿತ್ಸೆ ಫಲಕಾರಿಯಾಗದೇ ನ.17ರಂದು ಮೃತಪಟ್ಟಿದ್ದಾರೆ.
ಮಾನಸಿಕ ಕಾಯಿಲೆಯಿಂದ ಬಳಲುತಿದ್ದ ಅವರು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಕೇಸು ದಾಖಲಿಸಿಕೊಂಡಿರುವ ಕಾಪು ಪೊಲೀಸರು ತಿಳಿಸಿದ್ದಾರೆ.