ಹೊಯ್ಸಳ, ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
Update: 2024-11-20 15:54 GMT
ಉಡುಪಿ, ನ.20: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಾವೀನ್ಯತೆ, ತಾರ್ಕಿಕ ಸಾಧನೆ, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವ 5ರಿಂದ 18 ವರ್ಷದೊಳಗಿನ ಮಕ್ಕಳಿಂದ ಜಿಲ್ಲಾ ಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸೂಕ್ತ ದಾಖಲೆಗಳೊಂದಿಗೆ ಪ್ರಸ್ತಾವನೆ ಸಲ್ಲಿಸಲು ಡಿಸೆಂಬರ್ 2 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 204, ಮೊದಲ ಮಹಡಿ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574978ನ್ನು ಸಂಪರ್ಕಿಬಹುದು ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.