ಶಾಸಕರಿಂದ ನೂತನ ಜಿಲ್ಲಾಸ್ಪತ್ರೆ ಕಟ್ಟಡ ಕಾಮಗಾರಿ ಪರಿಶೀಲನೆ

Update: 2024-11-20 16:51 GMT

ಉಡುಪಿ, ನ.20: ಉಡುಪಿಯ ಅಜ್ಜರಕಾಡಿನಲ್ಲಿ ನಿರ್ಮಾಣ ಹಂತ ದಲ್ಲಿರುವ 250 ಹಾಸಿಗೆಗಳ ನೂತನ ಜಿಲ್ಲಾಸ್ಪತ್ರೆ ಕಾಮಗಾರಿ ಸ್ಥಳಕ್ಕೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು ಇಂದು ಭೇಟಿ ನೀಡಿ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿ, ಬಾಕಿ ಇರುವ ಕಾಮಗಾರಿಗಳ ಬಗ್ಗೆ ಅಧಿಕಾರಿ ಗಳಿಂದ ಮಾಹಿತಿ ಪಡೆದರು.

ನೂತನ ಜಿಲ್ಲಾಸ್ಪತ್ರೆಯ ಬೇಡಿಕೆಗೆ ಅನುಗುಣವಾಗಿ ಹುದ್ದೆಗಳ ಮಂಜೂರು, ಸುಸಜ್ಜಿತ ಕ್ರಿಟಿಕಲ್ ಕೇರ್ ಘಟಕ ನಿರ್ಮಾಣಕ್ಕೆ ಹೆಚ್ಚುವರಿ ಅನುದಾನ, ಅಗತ್ಯ ಮೂಲ ಸೌಕರ್ಯ ಅಭಿವೃದ್ಧಿಗೆ ಕಾಮಗಾರಿಗಳ ಮಂಜೂರಾತಿ ಹಾಗೂ ಉತ್ತಮ ಚಿಕಿತ್ಸೆಗೆ ಪೂರಕ ಅಗತ್ಯ ಸಲಕರಣೆಗಳ ಖರೀದಿ ಮೊದಲಾದ ಬೇಡಿಕೆಗಳ ಬಗ್ಗೆ ಅಧಿಕಾರಿಗಳಿಂದ ಶಾಸಕ ಯಶ್‌ಪಾಲ್ ಸುವರ್ಣ ಮಾಹಿತಿಗಳನ್ನು ಪಡೆದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶ್‌ಪಾಲ್ ಸುವರ್ಣ, ನೂತನ ಜಿಲ್ಲಾಸ್ಪತ್ರೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಒದಗಿಸಲು ವಿಶೇಷ ಆದ್ಯತೆ ನೀಡಲಿದ್ದು, ಆರೋಗ್ಯ ಸಚಿವರನ್ನು ಅತೀ ಶೀಘ್ರದಲ್ಲಿ ಭೇಟಿಯಾಗಿ ಕಾಮಗಾರಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಬಾಕಿ ಅನುದಾನ ಬಿಡುಗಡೆ ಹಾಗೂ ಅಗತ್ಯ ಹುದ್ದೆಗಳ ಮಂಜೂರು ಮಾಡಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಸ್ಪತ್ರೆಯ ಶಸ್ತ್ರ ಚಿಕಿತ್ಸಕರಾದ ಡಾ.ಅಶೋಕ್, ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿಗಳು, ಇಲಾಖೆಯ ಇಂಜಿನಿಯರ್‌ಗಳು ಹಾಗೂ ಗುತ್ತಿಗೆದಾರ ಕಂಪೆನಿಯ ಪ್ರತಿನಿಧಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News