ವಿಶೇಷ ಅಗತ್ಯತೆವುಳ್ಳ ಮಕ್ಕಳಿಗೆ ವೈದ್ಯಕೀಯ ತಪಾಸಣಾ ಶಿಬಿರ

Update: 2024-11-21 14:29 GMT

ಉಡುಪಿ, ನ.21: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಸಮಗ್ರ ಶಿಕ್ಷಾ ಕರ್ನಾಟಕ ಯೋಜನೆಯಡಿ ಪೂರ್ವ ಪ್ರಾಥಮಿಕ ತರಗತಿ ಯಿಂದ ಪದವಿ ಪೂರ್ವ ತರಗತಿವರೆಗಿನ ಶಾಲಾ ಶಿಕ್ಷಣ ಇಲಾಖೆಯ ವಿಶೇಷ ಅಗತ್ಯತೆಉಳ್ಳ ಮಕ್ಕಳಿಗೆ ವೈದ್ಯಕೀಯ ತಪಾಸಣಾ ಶಿಬಿರವು ಕಾರ್ಕಳ ವಲಯಕ್ಕೆ ನ.23ರಂದು ಕಾರ್ಕಳ ಬಿಆರ್‌ಸಿಯಲ್ಲಿ, ಬೈಂದೂರು ಮತ್ತು ಕುಂದಾಪುರ ವಲಯಕ್ಕೆ ನ.25ರಂದು ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಾಗೂ ಉಡುಪಿ ಮತ್ತು ಬ್ರಹ್ಮಾವರ ವಲಯದವರಿಗೆ ನ.26ರಂದು ಉಡುಪಿ ಅಜ್ಜರಕಾಡು ಬಿಆರ್‌ಸಿಯಲ್ಲಿ ನಡೆಯಲಿದೆ.

ಮಕ್ಕಳ ಅಗತ್ಯ ದಾಖಲೆಗಳಾದ ಯುಡಿಐಡಿ ಕಾರ್ಡ್, ರೇಷನ್ ಕಾರ್ಡ್, ಆಧಾರ್ ಕಾರ್ಡ್, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಆದಾಯ ಪ್ರಮಾಣ ಪತ್ರ ಹಾಗೂ ಬ್ಯಾಂಕ್ ಪಾಸ್‌ಬುಕ್ ಜೆರಾಕ್ಸ್ ಪ್ರತಿಯೊಂದಿಗೆ ಬಂದು ಶಿಬಿರದ ಪ್ರಯೋಜ ನವನ್ನು ಸಂಬಂಧಿಸಿದ ಪಾಲಕರು ಪಡೆದು ಕೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News