ಚುನಾವಣೆ ಗೆಲುವು: ಉಡುಪಿಯಲ್ಲಿ ಕಾಂಗ್ರೆಸ್‌ನಿಂದ ಸಂಭ್ರಮಾಚರಣೆ
ಉಡುಪಿ: ಕರ್ನಾಟಕ ರಾಜ್ಯದ ಶಿಗ್ಗಾಂವಿ, ಚನ್ನಪಟ್ಟಣ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರ ಹಾಗೂ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆದ ಕಾಂಗ್ರೆಸ್ ಮೈತ್ರಿಕೂಟದ ಗೆಲುವಿನ ಸಂಭ್ರಮವನ್ನು ಶನಿವಾರ ಬ್ರಹ್ಮಗಿರಿಯ ಕಾಂಗ್ರೆಸ್ ಭವನದ ಎದುರು ಆಚರಿಸಲಾಯಿತು.
ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸಂಭ್ರಮಾಚರಣೆ ಯಲ್ಲಿ ಭಾಗವಹಿಸಿ ಸಿಹಿ ತಿನಿಸನ್ನು ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಬಿಜೆಪಿಗರು ನಿರಂತರವಾಗಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಜನಪರ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿಕೊಂಡು ಸರಕಾರವನ್ನು ಅಸ್ತಿರಗೊಳಿಸುವ ಪ್ರಯತ್ನದಲ್ಲಿ ನಿರತರಾಗಿದ್ದರು. ಇದಕ್ಕೆ ರಾಜ್ಯ ಜನರು ತಕ್ಕ ಉತ್ತರ ನೀಡಿದ್ದಾರೆ. ರಾಜ್ಯದ ಇಬ್ಬರು ಮುಖ್ಯಮಂತ್ರಿಗಳ ಪುತ್ರರು ಹೀನಾಯ ವಾಗಿ ಸೋತಿದ್ದಾರೆ. ಕಾಂಗ್ರೆಸ್ ಪಕ್ಷದ ಗ್ಯಾರೆಂಟಿ ಗಳನ್ನು ಜನರು ಮೆಚ್ಚುಗೆ ವ್ಯಕ್ತಪಡಿಸಿ ಮತ ನೀಡಿದ್ದಾರೆ. ಬಿಜೆಪಿಗರ ಕಾಂಗ್ರೆಸ್ ಮುಕ್ತ ಭಾರತ ಕನಸು ನುಚ್ಚು ನೂರಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಮಹಾಬಲ ಕುಂದರ್, ಪ್ರಖ್ಯಾತ್ ಶೆಟ್ಟಿ, ಗಣೇಶ್ ನೆರ್ಗಿ, ಸತೀಶ್ ಕುಮಾರ್ ಮಂಚಿ, ಹಮ್ಮದ್, ಪ್ರಶಾಂತ್ ಪೂಜಾರಿ, ನವೀನ್ ಶೆಟ್ಟಿ, ಡಾ.ಸುನಿತಾ ಶೆಟ್ಟಿ, ರೋಶನಿ ಒಲಿವರ್, ಗೀತಾ ವಾಗ್ಲೆ, ಯತೀಶ್ ಕರ್ಕೇರ, ಲಕ್ಷ್ಮೀಕಾಂತ್ ಬೆಸ್ಕೂರು, ಶೇಖ್ ವಹೀದ್, ರೊನಾಲ್ಡ್ ಕರ್ಕಡ, ಕಮಲ್ ಸುವರ್ಣ, ಸಜ್ಜನ್ ಶೆಟ್ಟಿ, ಲಕ್ಷ್ಮಣ್ ಪೂಜಾರಿ, ಆನಂದ್ ಪೂಜಾರಿ ಕಿದಿಯೂರು, ಹಬೀಬ್ ಅಲಿ, ಪ್ರದೀಪ್ ಶೇರಿಗಾರ್, ಉದಯ್ ಪಂದುಬೆಟ್ಟು, ಭರತ್, ಸತೀಶ್ ಕೊಡವೂರು, ಸದಾನಂದ ಮೂಲ್ಯ, ವಿಲ್ಸನ್ ಸಿಕ್ವೇರ, ಸಂಧ್ಯಾ ತಿಲಕ್ರಾಜ್, ಸದಾನಂದ ಕಾಂಚನ್ ಮೊದಲಾದವರು ಉಪಸ್ಥಿತರಿದ್ದರು.