ಆಧಾರ್ ತಿದ್ದುಪಡಿ, ಹೊಸ ನೋಂದಣಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Update: 2024-11-23 16:14 GMT

ಉಡುಪಿ: ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಹಾಗೂ ಭಾರತೀಯ ಅಂಚೆ ಇಲಾಖೆ ಉಡುಪಿ ವಿಭಾಗದ ನೇತೃತ್ವದಲ್ಲಿ ಕ್ರಿಶ್ಚಿಯನ್ ಆಂಗ್ಲ ಮಾಧ್ಯಮ ಶಾಲೆ, ಕ್ರಿಶ್ಚಿಯನ್ ಪದವಿಪೂರ್ವ ಕಾಲೇಜಿನ ಸಹಭಾಗಿತ್ವದಲ್ಲಿ ಅಂಚೆ ಜನಸಂಪರ್ಕ ಅಭಿಯಾನ ಅಡಿಯಲ್ಲಿ ಆಧಾರ್ ತಿದ್ದುಪಡಿ ಮತ್ತು ಹೊಸ ನೋಂದಣಿ ಶಿಬಿರ ಹಾಗೂ ಸಿ.ಎಸ್.ಐ ಲಂಬಾರ್ಡ್ ಮೆಮೋರಿಯಲ್(ಮಿಷನ್ ಆಸ್ಪತ್ರೆ) ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ಕ್ರಿಶ್ಚಿಯನ್ ಆಂಗ್ಲ ಮಾಧ್ಯಮ ಶಾಲಾ ವಠಾರದಲ್ಲಿ ಜರಗಿತು.

ಶಿಬಿರವನ್ನು ಉಡುಪಿ ವಿಭಾಗದ ಅಂಚೆ ಅಧೀಕ್ಷಕ ರಮೇಶ್ ಪ್ರಭು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಬಡಗಬೆಟ್ಟು ಸೊಸೈಟಿಯ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಡುಪಿ ನಗರಸಭೆಯ ಸದಸ್ಯ ರಮೇಶ್ ಕಾಂಚನ್, ಉಡುಪಿ ದಕ್ಷಿಣ ಉಪ ವಿಭಾಗದ ಸಹಾಯಕ ಅಂಚೆ ಅಧೀಕ್ಷಕ ಕೃಷ್ಣರಾಜ ವಿಠ್ಠಲ ಭಟ್, ಮಿಷನ್ ಆಸ್ಪತ್ರೆಯ ಸೀನಿಯರ್ ಮೆಡಿಕಲ್ ಆಫೀಸರ್ ಡಾ.ಗಣೇಶ್ ಕಾಮತ್, ಕ್ರಿಶ್ಚಿಯನ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಹೆಲೆನ್ ವಿ.ಸಾಲಿನ್ಸ್, ಕ್ರಿಶ್ಚಿಯನ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ವೇತಾ ಶ್ರೀನಿವಾಸ್, ಸೊಸೈಟಿಯ ಉಪಾಧ್ಯಕ್ಷ ಜಾರ್ಜ್ ಸಾಮ್ಯುವೆಲ್ ಉಪಸ್ಥಿತರಿದ್ದರು.

ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ.ಶೇರಿಗಾರ್ ಸ್ವಾಗತಿಸಿದರು. ಮಲ್ಪೆ ಶಾಖಾ ವ್ಯವಸ್ಥಾಪಕರಾದ ನವೀನ್ ಕೆ. ಕಾರ್ಯಕ್ರಮ ನಿರೂಪಿಸಿದರು. ಸೊಸೈಟಿಯ ಸಹಾಯಕ ಪ್ರಧಾನ ವ್ಯವಸ್ಥಾಪಕ ಪ್ರವೀಣ್ ಕುಮಾರ್ ವಂದಿಸಿದರು.

200ಕ್ಕೂ ಅಧಿಕ ಮಂದಿ ಆಧಾರ್ ತಿದ್ದುಪಡಿ ಹಾಗೂ ಹೊಸ ನೋಂದಣಿ ಅಭಿಯಾನದ ಪ್ರಯೋಜನ ಪಡಕೊಂಡರು. ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ 150ಕ್ಕೂ ಅಧಿಕ ಮಂದಿ ಭಾಗಿಯಾದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News