ಉಡುಪಿ ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ

Update: 2024-11-24 16:02 GMT

ಉಡುಪಿ: ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ ಹಾಗೂ ಕ್ರಿಸ್ತರಾಜರ ಮಹೋ ತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ರವಿವಾರ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್‌ನಲ್ಲಿ ಶ್ರದ್ಧಾಭಕ್ತಿಯಿಂದ ಜರಗಿತು.

ಮಹೋತ್ಸವದ ಪ್ರಧಾನ ಬಲಿಪೂಜೆಯ ನೇತೃತ್ವ ವಹಿಸಿದ್ದ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂ.ಡಾ. ಜೆರಾಲ್ಡ್ ಐಸಾಕ್ ಲೋಬೊ ಭಕ್ತಾಧಿಗಳಿಗೆ ಸಂದೇಶ ನೀಡಿದರು. ನಾವು ತೋರಿಸುವ ಪ್ರೀತಿ ಕೇವಲ ತೋರ್ಪಡಿಕೆ ಯಾಗಿರದೆ ಅದನ್ನು ಕಾರ್ಯದ ಮೂಲಕ ಮಾಡಿ ತೋರಿಸು ವಂತಿರಬೇಕು. ಪ್ರೀತಿ ಮತ್ತು ಸೇವೆ ಕ್ರೆಸ್ತ ಧರ್ಮದ ಮೂಲ ತತ್ತ್ವವಾಗಿದ್ದು, ಅದನ್ನು ನಮ್ಮ ನೆರೆಹೊರೆಯವರಲ್ಲಿ ತೋರ್ಪಡಿಸಲು ಹಿಂಜರಿಯಬಾರದು. ನಮ್ಮ ಜೀವನದಲ್ಲಿ ಕ್ಷಮೆ ಪ್ರಿತಿ, ಸೇವೆಯ ಮೂಲಕ ದೈವ ಸಾಮ್ರಾಜ್ಯವನ್ನು ಕಟ್ಟುವಲ್ಲಿ ಪಣತೊಡು ವಂತಾಗಬೇಕು ಎಂದರು.

ಪವಿತ್ರ ಬಲಿಪೂಜೆಯ ಬಳಿಕ ಧರ್ಮಗುರು ವಂ.ವಿಲ್ಸನ್ ಡಿಸೋಜ ಪರಮ ಪ್ರಸಾದ ಆರಾಧನೆಯನ್ನು ನೆರವೇರಿಸಿದರು. ಬಳಿಕ ಪರಮ ಪ್ರಸಾದವನ್ನು ವಿಶೇಷವಾಗಿ ಅಲಂಕರಿಸಲ್ಪಟ್ಟ ತೆರೆದ ವಾಹನದಲ್ಲಿ ರಾಜಬೀದಿಯಲ್ಲಿ ಮೆರವಣಿಗೆಯ ಮೂಲಕ ಕೊಂಡೊಯ್ದು ಸಂತೆಕಟ್ಟೆ ಕಲ್ಯಾಣಪುರ ಮೌಂಟ್ ರೋಸರಿ ಚರ್ಚಿನ ಮೈದಾನದಲ್ಲಿ ಬಹಿರಂಗ ಪ್ರಾರ್ಥನೆಯ ಮೂಲಕ ಗೌರವ ಸಲ್ಲಿಸಲಾಯಿತು.

ಮೆರವಣಿಗೆಯಲ್ಲಿ ಪಾಲ್ಗೊಂಡ ಸಾವಿರಾರು ಭಕ್ತಾದಿಗಳು ನಗರದ ರಸ್ತೆಗಳಲ್ಲಿ ದೇವರನ್ನು ಮಹಿಮೆಪಡಿಸುತ್ತಾ, ಆರಾಧಿ ಸುತ್ತಾ, ಬ್ಯಾಂಡ್-ಸಂಗೀತ ಮತ್ತು ಭಕ್ತಿ ಗೀತೆಗಳೊಂದಿಗೆ, ಜನಸಾಮನ್ಯರಿಗೆ ಅಡಚಣೆಯನ್ನುಂಟು ಮಾಡದೆ ಎರಡು ಸಾಲುಗಳಲ್ಲಿ ಸಾಗಿತು.

ಈ ವೇಳೆ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್‌ನ ಧರ್ಮಗುರು ವಂ| ಡಾ.ಜೆನ್ಸಿಲ್ ಆಲ್ವಾ ಪವಿತ್ರ ಬೈಬಲ್ ವಾಚನ ಮಾಡಿದರು. ಉಡುಪಿ ಧರ್ಮಪ್ರಾಂತ್ಯವ್ಯಾಪ್ತಿಯ ಚರ್ಚ್‌ಗಳಿಂದ ಸುಮಾರು 3000ಕ್ಕೂ ಅಧಿಕ ಮಂದಿ ಭಕ್ತಾದಿಗಳು, 60ಕ್ಕೂ ಅಧಿಕ ಧರ್ಮಗುರುಗಳು, 100ಕ್ಕೂ ಅಧಿಕ ಧರ್ಮಭಗಿನಿಯರು ಭಾಗವಹಿಸಿದ್ದರು.

ಉಡುಪಿ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ಕುಲಪತಿ ವಂ.ಡಾ.ರೋಶನ್ ಡಿಸೋಜ, ಸಾರ್ವಜನಿಕ ಸಂಪರ್ಕಾಧಿಕಾರಿ ವಂ.ಡೆನಿಸ್ ಡೆಸಾ, ಶಿರ್ವ, ಕಾರ್ಕಳ, ಉಡುಪಿ ವಲಯಗಳ ಪ್ರಧಾನ ಧರ್ಮ ಗುರುಗಳಾದ ವಂ.ಡಾ.ಲೆಸ್ಲಿ ಡಿಸೋಜ, ವಂ.ಆಲ್ಬನ್ ಡಿಸೋಜ, ವಂ.ಚಾರ್ಲ್ಸ್ ಮಿನೇಜಸ್, ಮೌಂಟ್ ರೋಸರಿ ಚರ್ಚಿನ ಧರ್ಮಗುರು ವಂ.ರೋಕ್ ಡೇಸಾ, ಸಹಾಯಕ ಧರ್ಮಗುರು ಒಲಿವರ್ ನಜ್ರೆತ್, ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್‌ನ ಸಹಾಯಕ ಧರ್ಮ ಗುರು ವಂ.ಪ್ರದೀಪ್ ಕಾರ್ಡೊಜ, ಧರ್ಮಪ್ರಾಂತ್ಯದ ಪಾಲನಾ ಸಮಿತಿಯ ಕಾರ್ಯದರ್ಶಿ ಲೆಸ್ಲಿ ಅರೋಝಾ ಉಪಸ್ಥಿತರಿದ್ದರು.

ಮೌಂಟ್ ರೋಸರಿ ಚರ್ಚಿನಲ್ಲಿ ನಡೆದ ಆರಾಧನೆಯ ವಿಧಿಯನ್ನು ವಂ.ಸಿರಿಲ್ ಲೋಬೊ ಭಕ್ತಿಯುತವಾಗಿ ನಡೆಸಿದರು. ಪ್ರೀಯಾ ಫುರ್ಟಾಡೊ ವಂದಿಸಿದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News