ಉಡುಪಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ
ಉಡುಪಿ, ನ.25: ಪೊಲೀಸ್ ಸಿಬಂದಿ, ಅಧಿಕಾರಿಗಳು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ತಮ್ಮ ವೈಯಕ್ತಿಕ ಆಸಕ್ತಿಗಳನ್ನು ಬದಿಗಿರಿಸಿ ಕರ್ತವ್ಯ ಮಾಡುವಾಗ ಒತ್ತಡ ಸಹಜ. ಅವರ ಆಸಕ್ತಿಯ ಕ್ರೀಡೆಗಳಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡು ವುದು ಶ್ಲಾಘನೀಯ ಕೆಲಸ ಎಂದು ಉಡುಪಿ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದ್ದಾರೆ.
ಉಡುಪಿ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾದ ಮೂರು ದಿನಗಳ ಉಡುಪಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಕ್ರೀಡಾಕೂಟದಲ್ಲಿ ಕೆಲವರಿಗೆ ಪ್ರಶಸ್ತಿ ಬರಬಹುದು. ಆದರೂ ಭಾಗವಹಿಸು ವಿಕೆ ಮುಖ್ಯ. ಆಸಕ್ತಿಯಿಂದ ಪಾಲ್ಗೊಳ್ಳುವ ಮನಸ್ಸು ಇರಬೇಕು. ಇದರಿಂದ ಆರೋಗ್ಯವೂ ಸದೃಢವಾಗಲು ಸಾಧ್ಯವಿದೆ ಎಂದರು.
ಕರಾವಳಿ ಕಾವಲು ಪಡೆಯ ಪೊಲೀಸ್ ಅಧೀಕ್ಷಕ ಮಿಥುನ್ ಎಚ್.ಎನ್. ಶುಭಹಾರೈಸಿದರು. ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ಸ್ವಾಗತಿಸಿದರು. ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಟಿ.ಸಿದ್ದಲಿಂಗಪ್ಪ ವಂದಿಸಿದರು. ಯೋಗೀಶ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು.
ಕ್ರೀಡಾಕೂಟದಲ್ಲಿ ಉಡುಪಿ, ಕುಂದಾಪುರ, ಕಾರ್ಕಳ ಉಪವಿಭಾಗ, ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಮಹಿಳಾ ತಂಡಗಳು ಭಾಗವಹಿಸಿವೆ. ಈ ತಂಡಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಡಿಎಆರ್ ಉಡುಪಿ ಆರ್‌ಎಸ್ಸೈ ಅಮೀರ್ ಪಾಶಾ ಪ್ರಮಾಣ ವಚನ ಬೋದಿಸಿದರು. ಉಡುಪಿವ ಡಿಎಆರ್‌ನ ಎಪಿಸಿ ಜೀವನ್ ನಾಯ್ಕ್ ಕ್ರೀಡಾಜ್ಯೋತಿ ಬೆಳಗಿಸಿದರು.