ಉಡುಪಿಯ ಹಳ್ಳಿಗಳಲ್ಲಿ ಅಸ್ಪೃಶ್ಯತೆ, ಶೋಷಣೆ ಇನ್ನೂ ಜೀವಂತ: ಶ್ಯಾಮರಾಜ್ ಬಿರ್ತಿ

Update: 2024-11-27 12:32 GMT

ಬ್ರಹ್ಮಾವರ: ಬುದ್ದಿವಂತರ, ವಿದ್ಯಾವಂತರ ಜಿಲ್ಲೆಯೆಂದು ಕರೆಸಿ ಕೊಳ್ಳುವ ಉಡುಪಿ ಜಿಲ್ಲೆಯ ಹಳ್ಳಿ ಹಳ್ಳಿಗಳಲ್ಲೂ ಅಸ್ಪೃ ಶ್ಯತೆ, ದಬ್ಬಾಳಿಕೆ, ಶೋಷಣೆ, ದೌರ್ಜನ್ಯಗಳು ಇನ್ನೂ ಜೀವಂತವಾಗಿವೆ ಎಂದು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಉಡುಪಿ ಜಿಲ್ಲಾ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ ಆರೋಪಿಸಿದ್ದಾರೆ.

ಬ್ರಹ್ಮಾವರ ತಾಲೂಕಿನ ಬಿಲ್ಲಾಡಿಯ ದ.ಸಂ.ಸ. ಅಂಬೇಡ್ಕರ್ ವಾದ ಗ್ರಾಮ ಶಾಖೆಯ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಅವರು ಮಾತನಾಡುತಿದ್ದರು.

ದ.ಸಂ.ಸ. ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ ಗಿಳಿಯಾರು ಮಾತನಾಡಿ, ಈ ಸಮಾಜದಲ್ಲಿರುವ ನಿರ್ಗತಿಕರು, ಶೋಷಿತರ ಪರವಾಗಿ ದಸಂಸ ನಡೆಸುವ ಹೋರಾಟದಲ್ಲಿ ಯಾವುದೇ ಸ್ವಹಿತಾಸಕ್ತಿಗೆ ಅವಕಾಶ ಇಲ್ಲ. ನಮ್ಮ ಭೀಮ ಸೇನಾನಿಗಳು ಮೈಯೆಲ್ಲಾ ಕಣ್ಣಾಗಿ ಸಮಾಜದಲ್ಲಿ ನಮಗಾಗುವ ಅನ್ಯಾಯದ ವಿರುದ್ಧ ಸಿಡಿದೇಳಬೇಕು. ಶೋಷಣೆ ಮತ್ತು ದೌರ್ಜನ್ಯವನ್ನು ಖಂಡಿಸಿ ದಮನಿತರ ಧ್ವನಿಯಾಗಬೇಕು ಎಂದರು.

ಕಾರ್ಯಕ್ರಮವನ್ನು ಬಿಲ್ಲಾಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಪ್ರಥ್ವಿರಾಜ್ ಹೆಗ್ಡೆ ಉದ್ಘ್ಘಾಟಿಸಿದರು. ತಾಪಂ ಮಾಜಿ ಸದಸ್ಯೆ ನಿರ್ಮಲ ಶೆಟ್ಟಿ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಧ್ಯಕ್ಷತೆಯನ್ನು ದಸಂಸ ಬ್ರಹ್ಮಾವರ ತಾಲೂಕು ಸಂಚಾಲಕ ವಡ್ಡರ್ಸೆ ಶ್ರೀನಿವಾಸ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ತಾಪಂ ಮಾಜಿ ಸದಸ್ಯರಾದ ಪ್ರವೀಣ್ ಶೆಟ್ಟಿ ವಂಡಾರು, ಚಂದ್ರಶೇಖರ್ ಶೆಟ್ಟಿ ಬಿಲ್ಲಾಡಿ, ದಸಂಸ ಜಿಲ್ಲಾ ಸಂಘಟನಾ ಸಂಚಾಲಕರಾದ ಶ್ಯಾಮಸುಂದರ ತೆಕ್ಕಟ್ಟೆ, ಸುರೇಶ ಹಕ್ಲಾಡಿ, ಜಿಲ್ಲಾ ಸಮಿತಿಯ ಸದಸ್ಯರಾದ ಕುಮಾರ್ ಕೋಟ, ಹರೀಶ್ಚಂದ್ರ ಬಿರ್ತಿ, ರಾಜು ಬೆಟ್ಟಿನಮನೆ, ಸುಧಾಕರ ಮಾಸ್ಟರ್ ಗುಜ್ಜರಬೆಟ್ಟು, ಶಿವಾನಂದ ಬಿರ್ತಿ ಉಪಸ್ಥಿತರಿದ್ದರು.

ಪ್ರಶಾಂತ್ ಬಿರ್ತಿ ಮತ್ತು ತಂಡದವರು ಹೋರಾಟದ ಗೀತೆಗಳನ್ನು ಹಾಡಿದರು. ಗೌರಿ ಬಿಲ್ಲಾಡಿ ಅವರನ್ನು ಬಿಲ್ಲಾಡಿ ಶಾಖೆಯ ಮಹಿಳಾ ಸಂಚಾಲಕಿಯಾಗಿ ಆಯ್ಕೆ ಮಾಡಲಾಯಿತು. ಚಂದ್ರ ಕೊರ್ಗಿ ಸ್ವಾಗತಿಸಿದರು. ಶ್ರೀನಿವಾಸ ಮಲ್ಯಾಡಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News