ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

Update: 2024-12-03 15:18 GMT

ಉಡುಪಿ, ಡಿ.3: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಶೈಕ್ಷಣಿಕ ವರ್ಷಕ್ಕೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೋತ್ತರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾರ್ಥಿ ವೇತನ, ಬಿಎಸ್ಸಿ/ಜಿಎನ್‌ಎಂ ನರ್ಸಿಂಗ್, ಐಐಟಿ, ಐಐಐಟಿ, ಎನ್‌ಐಟಿ, ಐಐಎಂ, ಐಐಎಸ್‌ಇಆರ್, ಎಐಐಎಂಎಸ್, ಎನ್‌ಎಲ್‌ಯು, ಐಎನ್‌ಐ ಮತ್ತು ಐಯುಎಸ್‌ಎಲ್‌ಎ ಇತ್ಯಾದಿ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಅಂಗಿಕೃ ವಿವಿಗಳಲ್ಲಿ ಪೂರ್ಣಕಾಲಿಕವಾಗಿ ಪಿಹೆಚ್‌ಡಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಫೆಲೋಶಿಪ್‌ಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 31ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News