ಬಂಟಕಲ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

Update: 2024-12-03 15:23 GMT

ಉಡುಪಿ : ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್), ಯುವ ರೆಡ್‌ಕ್ರಾಸ್ ಘಟಕ, ಎಚ್.ಡಿ.ಎಫ್.ಸಿ ಬ್ಯಾಂಕ್, ಉಡುಪಿ, ಭಾರತೀಯ ರೆಡ್ ಕ್ರಾಸ್ ಘಟಕದ ರಕತಿ ನಿಧಿ ಕೇಂದ್ರ, ಕುಂದಾಪುರ, ರೆಡ್ ರಿಬ್ಬನ್ ಕ್ಲಬ್ ಉಡುಪಿ, ಕಾಲೇಜಿನ ಎನ್‌ಸಿಸಿ ಘಟಕ ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ಕಾಲೇಜಿನ ಆವರಣದಲ್ಲಿ ಮಂಗಳವಾರ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಭಾರತೀಯ ರೆಡ್ ಕ್ರಾಸ್ ಘಟಕದ ಜಯಕರ್ ಶೆಟ್ಟಿ ಮಾತನಾಡಿದರು. ಸಂಸ್ಥೆಯ ಉಪಪ್ರಾಂಶುಪಾಲ ಡಾ. ಗಣೇಶ್ ಐತಾಳ್, ಡೀನ್ ಡಾ.ನಾಗರಾಜ್ ಭಟ್, ಉದ್ಯೋಗ ಮತ್ತು ತರಬೇತಿ ಅಧಿಕಾರಿ ಡಾ.ಮಂಜುನಾಥ್, ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್‌ಕ್ರಾಸ್ ಘಟಕ, ರೋಟರ್ಯಾಕ್ಟ್ ಕ್ಲಬ್‌ನ ಸಂಯೋಜಕ ಸಚಿನ್ ಪ್ರಭು ಮತ್ತು ವಿವಿಧ ವಿಭಾಗದ ಮುಖ್ಯಸ್ಥರು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಅಧ್ಯಾಪಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಂದ ಸೇರಿ ಒಟ್ಟು ೧೧೦ ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News