ಉಡುಪಿ ಜಿಲ್ಲೆಯಲ್ಲಿ ಕಾರ್ಮಿಕ ಸೇವೆಗಳ ವಿವಿದ್ದೋದ್ದೇಶ ಸಹಕಾರ ಸಂಘ ಸ್ಥಾಪನೆ: ಡಿಸಿ ವಿದ್ಯಾಕುಮಾರಿ

Update: 2024-12-04 14:04 GMT

ಉಡುಪಿ: ಜಿಲ್ಲೆಯ ಕಾರ್ಮಿಕರಿಗೆ ಅನುಕೂಲವಾಗುವಂತೆ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದ್ಧೋದ್ದೇಶ ಸಹಕಾರ ಸಂಘ ವನ್ನು ತೆರೆಯಲು ಅಗತ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡು ಜಿಲ್ಲೆಯ ಜನರಿಗೆ ಅನುಕೂಲ ಮಾಡಿಕೊ ಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಸಂಬಂಧಿತ ಇಲಾಖೆಗೆ ಸೂಚನೆ ನೀಡಿದ್ದಾರೆ.

ಬುಧವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯಲ್ಲಿ ಹೊಸದಾಗಿ ಕಾರ್ಮಿಕ ಸೇವೆಗಳ ವಿವಿದ್ಧೋದ್ದೇಶ ಸಹಕಾರ ಸಂಘ(ನಿ) ಸ್ಥಾಪನೆ ಕುರಿತು ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದ್ಧೋದ್ದೇಶ ಸಹಕಾರ ಸಂಘ ಸ್ಥಾಪನೆಯಿಂದ ಕಾರ್ಮಿಕರು, ಹೊರ ಗುತ್ತಿಗೆ ದಾರರು ವಿವಿಧ ರೀತಿಯ ಆರ್ಥಿಕ ಲಾಭಗಳನ್ನು ಪಡೆಯಲು ಅನುಕೂಲವಾಗಲಿದೆ. ಜೊತೆಗೆ ಸರಕಾರದ ವಿವಿಧ ಇಲಾಖೆ ಗಳು ಹಾಗೂ ಇವುಗಳ ಅಧೀನದಲ್ಲಿ ಬರುವ ನಿಗಮ, ಮಂಡಳಿ ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರ ಗುತ್ತಿಗೆ ನೌಕರರಿಗೂ ವಿವಿಧ ಸೇವೆಗಳನ್ನು ಒದಗಿಸಲು ಅನುಕೂಲವಾಗಲಿದೆ ಎಂದರು.

ಹೊರಗುತ್ತಿಗೆದಾರರ ವೇತನ ಪಾವತಿ, ಇ.ಎಸ್.ಐ, ಪಿ.ಎಫ್ ಮುಂತಾದ ಶಾಸನಾತ್ಮಕ ಸೌಲಭಗಳನ್ನು ನೌಕರರಿಗೆ ಒದಗಿಸುವ ಮೂಲಕ ಯಾವುದೇ ಸಮಸ್ಯೆಗಳಿಲ್ಲದೆ ಯಶಸ್ವಿಯಾಗಿ ಕಾರ್ಯ ನಿರ್ವಸಬಹುದಾಗಿದೆ ಎಂದರು.

ರಾಜ್ಯದಲ್ಲಿ ಈಗಾಗಲೇ ಹಲವು ಜಿಲ್ಲೆಗಳಲ್ಲಿ ಈ ರೀತಿಯ ಸಂಘಗಳನ್ನು ಸ್ಥಾಪಿಸಿ, ಸದರಿ ಸಂಘದ ಮೂಲಕ ಹೊರ ಗುತ್ತಿಗೆ ನೌಕರರನ್ನು ವಿವಿಧ ಇಲಾಖೆಗಳಿಗೆ ನಿಯೋಜಿಸಲಾಗುತ್ತಿದೆ. ಅವರಿಗೆ ವೇತನ ಸೇರಿದಂತೆ ಶಾಸನಾತ್ಮಕವಾಗಿ ನೀಡಬೇಕಾದ ಸೇವೆಗಳನ್ನು ಯಾವುದೇ ಸಮಸ್ಯೆಗಳಿಲ್ಲದೆ ಸರಳವಾಗಿ ನೀಡುವಲ್ಲಿ ಯಶಸ್ವಿಯಾಗಿದೆ. ಹೀಗಾಗಿ ಇದನ್ನು ನಮ್ಮ ಜಿಲ್ಲೆ ಯಲ್ಲಿಯೂ ಅನುಷ್ಠ್ಠಾನಗೊಳಿಸಬೇಕಾಗಿದೆ ಎಂದರು.

ಸಂಘದ ಪ್ರಾರಂಭಕ್ಕೆ ಅಗತ್ಯವಿರುವ ಕಚೇರಿ, ಸಂಘದ ಬೈಲಾ, ಅಡಕ್ ಸಮಿತಿ ಸೇರಿದಂತೆ ಎಲ್ಲಾ ರೀತಿಯ ಅಗತ್ಯ ತಯಾರಿಗಳನ್ನು ಮಾಡಿಕೊಂಡು ಶೀಘ್ರದಲ್ಲಿಯೇ ಸಂಘ ಸ್ಥಾಪನೆಗೆ ಮುಂದಾಗಬೇಕು ಎಂದು ಸೂಚನೆ ನೀಡಿದ ಜಿಲ್ಲಾಧಿ ಕಾರಿ, ಪ್ರಸ್ತುತ ಚಾಲ್ತಿಯಲಿರುವ ಕಾರ್ಮಿಕ ಇಲಾಖೆಗಳ ವಿವಿದ್ದೋದ್ದೇಶ ಸಹಕಾರ ಸಂಘಕ್ಕೆ ಜಿಲ್ಲೆಯ ತಂಡ ಭೇಟಿ ನೀಡಿ, ವೀಕ್ಷಿಸಿ ಮಾಹಿತಿ ಕಲೆ ಹಾಕಬೇಕು ಎಂದರು.

ಜಿಲೆಯಲ್ಲಿ ವಿವಿಧ ಇಲಾಖೆಗಳಲ್ಲಿ 2080ಕ್ಕೂ ಹೆಚ್ಚು ಮಂದಿ ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದ ಡಿಸಿ, ಕೆಲವು ಗುತ್ತಿಗೆ ಸಂಸ್ಥೆಗಳು ತಮಗೆ ಸರಿಯಾಗಿ ವೇತನ, ಪಿ.ಎಫ್ ಸೇರಿದಂತೆ ವಿವಿಧ ಕಾನೂನಾತ್ಮಕ ಸೌಲಭ್ಯಗಳನ್ನು ನೀಡುತ್ತಿಲ್ಲ ಎಂದು ಅನೇಕರು ದೂರುತಿದ್ದಾರೆ. ಈ ರೀತಿಯ ವಿವಿದ್ದೋದ್ದೇಶ ಸಂಘಗಳನ್ನು ಮಾಡಿಕೊಳ್ಳು ವುದರಿಂದ ಅನೇಕ ಸಮಸ್ಯೆಗಳನ್ನು ಬಗೆಹರಿಸಬಹುದಾಗಿದೆ ಎಂದರು.

ವಿವಿದ್ದೋದ್ದೇಶ ಸಹಕಾರ ಸಂಘದ ಪ್ರಾರಂಭ ಕುರಿತು ಈಗಾಗಲೇ ಜಿಲ್ಲೆಯ ಅನೇಕ ಸರಕಾರಿ, ನಿಗಮ-ಮಂಡಳಿ ಹಾಗೂ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೊರ ಗುತ್ತಿಗೆ ಆಧಾರದ ಸಿಬ್ಬಂದಿಗಳಿಗೆ ಇದೇ ಡಿ.12ರಂದು ಸಭೆಯನ್ನು ಕರೆದು ಅವರೊಂದಿಗೆ ಇದರ ಸಾಧಕ-ಬಾಧಕಗಳನ್ನು ಚರ್ಚಿಸಲಾಗುವುದು ಎಂದೂ ಡಾ.ವಿದ್ಯಾಕುಮಾರಿ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾಅಲ್ತಾಫ್ ಅಹಮದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿ ಕಾರಿ ಡಾ. ಐ.ಪಿ ಗಡದ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ಬಾಲ ಕಾರ್ಮಿಕ ಸಂಘದ ಯೋಜನಾಧಿ ಕಾರಿ ಅಮೃತ, ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು, ತಾಲೂಕು ತಹಶೀಲ್ದಾರ್‌ಗಳು ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News