ನಲ್‌ಜಲ್ ಮಿತ್ರ ಬಹು ಕೌಶಲ್ಯ ತರಬೇತಿ ಉದ್ಘಾಟನೆ

Update: 2024-12-17 16:02 GMT

ಉಡುಪಿ: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋ ಪಾಯ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಉಡುಪಿ ಇವರ ಸಹಯೋಗದಲ್ಲಿ ನಲ್‌ಜಲ್ ಮಿತ್ರ ಬಹು ಕೌಶಲ್ಯ ತರಬೇತಿ ಕಾರ್ಯಕ್ರಮ ಅಲೆವೂರು ಪ್ರಗತಿ ನಗರದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸೋಮವಾರ ನಡೆಯಿತು.

ಜಿಲ್ಲಾ ಪಂಚಾಯತ್‌ನ ಯೋಜನಾ ನಿರ್ದೇಶಕ ಶ್ರೀನಿವಾಸ್ ರಾವ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜಿಲ್ಲೆಯಲ್ಲಿ ಜಲ್ ಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೆ ನಳ್ಳಿ ನೀರಿನ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ. ಈ ಜಲಜೀವನ್ ಮಿಷನ್ ಅಡಿಯಲ್ಲಿ ನಲ್‌ಜಲ್ ಮಿತ್ರ ಕಾರ್ಯಕ್ರಮವನ್ನು ಅನುಷ್ಠ್ಠಾನ ಮಾಡಲು ಪ್ರತಿ ಗ್ರಾಮ ಪಂಚಾಯತ್‌ನಿಂದ ಎರಡು ಸಂಜೀವಿನಿ ಸ್ವಸಹಾಯ ಗುಂಪಿನ ಮಹಿಳೆಯರನ್ನು ಆಯ್ಕೆ ಮಾಡಲಾಗಿದೆ. ಈ ಸದ್ಯಸರಿಗೆ ಹದಿನೇಳು ದಿನಗಳ ಬಹು ಕೌಶಲ್ಯ ತರಬೇತಿಯನ್ನು ನೀಡಿ ಗ್ರಾಪಂಗೆ ನಿಯೋಜನೆ ಮಾಡಲಾಗುವುದು ಎಂದರು.

ಜಿಲ್ಲೆಯಲ್ಲಿ ಸಂಜೀವಿನಿ ಸ್ವಸಹಾಯ ಸಂಘದ ಮಹಿಳೆಯರಿಗೆ ವಿವಿಧ ತರಬೇತಿ ನೀಡಿ ಸ್ವ-ಉದ್ಯೋಗಕ್ಕೆ ಅವಕಾಶ ಕಲ್ಪಿ ಸುವ ಮೂಲಕ ಗ್ರಾಮೀಣ ಮಹಿಳೆಯರನ್ನು ಸಾಮಾಜಿಕ ಹಾಗೂ ಆರ್ಥಿಕವಾಗಿ ಸಬಲೀಕರಣ ಗೊಳಿಸಲಾಗುತ್ತಿದೆ ಎಂದ ಅವರು, ಜಲ್ ಜೀವನ್ ಮಿಷನ್‌ನಡಿ ತರಬೇತಿ ಪಡೆದ ಮಹಿಳೆಯರನ್ನು ನಲ್‌ಜಲ್ ಮಿತ್ರರನ್ನಾಗಿ ಗ್ರಾಪಂನಲ್ಲಿ ನಿಯೋಜಿ ಸುವುದರ ಮೂಲಕ ಸಂಜೀವಿನಿ ಮಹಿಳೆಯರನ್ನು ಇನ್ನಷ್ಟು ಆರ್ಥಿಕವಾಗಿ ಸಬಲೀಕರಣಗೊಳಿಸುವ ಗುರಿ ಹೊಂದಲಾಗಿದೆ ಎಂದರು.

ಉಡುಪಿ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ವಿಜಯ ಮಾತನಾಡಿ, ಸಂಜೀವಿನಿ ಯೋಜನೆಯಡಿ ನೂತನ ಕಾರ್ಯಕ್ರಮ ಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಪ್ರಸ್ತುತ ಸಂಜೀವಿನಿ ಸ್ವಸಹಾಯ ಸಂಘದ ಮಹಿಳೆಯರು ವಿವಿಧ ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿ ಕೊಂಡಿದ್ದಾರೆ. ಇಂದು ನಲ್‌ಜಲ್ ಮಿತ್ರ ಕಾರ್ಯಕ್ರಮದಡಿ ಸಂಜೀವಿನಿ ಗುಂಪಿನ ಮಹಿಳೆಯರಿಗೆ ಬಹು ಕೌಶಲ್ಯ ತರಬೇತಿ ನೀಡಿ ಗ್ರಾಪಂ ಮಟ್ಟದಲ್ಲಿ ಜಲ್ ಜೀವನ್ ಮಿಷನ್‌ನನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲಾ ಗುವುದು ಎಂದರು.

ತರಬೇತಿ ಕಾರ್ಯಕ್ರಮದಲ್ಲಿ ಉಡುಪಿ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಫರ್ಝಾನ, ಜಲ್‌ಜೀವನ್ ಮಿಷನ್‌ನ ರಾಜ್ಯ ಸಂಪನ್ಮೂಲ ವ್ಯಕ್ತಿ ಜೋಸೆಫ್ ರೆಬೆಲೋ, ನಲ್‌ಜಲ್ ಮಿತ್ರದ ತರಬೇತುದಾರ ಗಣಪತಿ ಭಟ್, ಜಿಲ್ಲಾ ಕೌಶಲ್ಯ ಮತ್ತು ಉದ್ಯಮಶೀಲತಾ ಇಲಾಖೆಯ ಸಹಾಯಕ ನಿರ್ದೇಶಕ ಅರುಣ್ ಪಿ., ಸಂಜೀವಿನಿ ಯೋಜನೆ ಜಿಲ್ಲಾ ವ್ಯವಸ್ಥಾಪಕ ಅವಿನಾಶ್ ಹಾಗೂ ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News