ಗೃಹರಕ್ಷಕದಳದಲ್ಲಿ ಸೇವೆ ಸಲ್ಲಿಸಲು ಅವಕಾಶ
Update: 2024-12-17 16:06 GMT
ಉಡುಪಿ: ಜಿಲ್ಲಾ ಗೃಹರಕ್ಷಕ ದಳ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಇಚ್ಛಿಸುವ ಕನಿಷ್ಠ ಎಸೆಸೆಲ್ಸಿ ಉತ್ತೀರ್ಣ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ 19ರಿಂದ 45 ವರ್ಷದೊಳಗಿನ ಪುರುಷ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಗ್ನಿಶಾಮಕ ಕಚೇರಿ ಆವರಣದಲ್ಲಿರುವ ಜಿಲ್ಲಾ ಗೃಹ ರಕ್ಷಕದಳ ಕಚೇರಿ ದೂ.ಸಂಖ್ಯೆ: 0820-2533650 ಅಥವಾ ತಾಲೂಕು ಘಟಕಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಗೃಹರಕ್ಷಕ ದಳದ ಜಿಲ್ಲಾ ಕಮಾಂಡೆಂಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.