ಸಾಲ ಸೌಲಭ್ಯ: ಅರ್ಜಿ ಆಹ್ವಾನ

Update: 2024-12-17 16:26 GMT

ಉಡುಪಿ: ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾದ ಸ್ವಯಂ ಉದ್ಯೋಗ ನೇರ ಸಾಲ -ಕುರಿ ಸಾಕಾಣಿಕೆ ಹಾಗೂ ಸ್ವಾವಲಂಬಿ ಸಾರಥಿ-ಫುಡ್ ಕಾರ್ಟ್ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ವೆಬ್‌ಸೈಟ್ -https://sevasindhu.karnataka.gov.in- ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಡಿ.29 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574884 ಅಥವಾ ಕಲ್ಯಾಣ ಮಿತ್ರ ಏಕೀಕೃತ ಎಸ್‌ಸಿ/ಎಸ್‌ಟಿ ಸಹಾಯವಾಣಿ ಸಂಖ್ಯೆ: 9482300400 ಅನ್ನು ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News