ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮಸ್ಯೆಗಳ ಬಗ್ಗೆ ಉಡುಪಿ ಡಿಸಿಗೆ ಮನವಿ
ಉಡುಪಿ, ಡಿ.18: ಬನ್ನಂಜೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿನ ಸಮಸ್ಯೆಗಳ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ನಿಯೋಗ ಬುಧವಾರ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಅವರಿಗೆ ಮನವಿ ಸಲ್ಲಿಸಿತು.
ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಎಟಿಎಂ ಸೌಲಭ್ಯ ಇಲ್ಲ. ಮಹಿಳೆ ಹಾಗೂ ಪುರುಷರಿಗೆ ಶೌಚಾಲಯಕ್ಕೆ ಹೋಗಲು 10ರೂ. ಶುಲ್ಕ ವಿಧಿಸಲಾ ಗುತ್ತಿದೆ. ಬಸ್ ನಿಲ್ದಾಣದಲ್ಲಿ ಕೆಲಸ ಮಾಡಲು ಕೇವಲ ಮೂರು ಮಹಿಳೆಯ ರನ್ನು ನಿಯೋಜಿಸಲಾ ಗಿದೆ. ಶುಚಿತ್ವ ಇಲ್ಲದೆ ಇಡೀ ನಿಲ್ದಾಣ ದುರ್ವಾಸನೆ ಬೀರುತ್ತಿದೆ. ಬಸ್ ನಿಲ್ದಾಣದಲ್ಲಿ ಏಜೆಂಟರ ಹಾವಳಿ ಹೆಚ್ಚಾಗಿದೆ ಎಂದು ನಿಯೋಗ ಮನವಿಯಲ್ಲಿ ದೂರಿದೆ.
ಈ ಬಗ್ಗೆ ಸೂಕ್ತ ಕ್ರಮ ಜರಗಿಸುವಂತೆ ನಿಯೋಗ ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದೆ. ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ, ಜಿಲ್ಲಾ ಮಹಿಳಾ ಅಧ್ಯಕ್ಷೆ ಗೀತಾ ಪಾಂಗಾಳ, ಮಹಿಳಾ ಉಪಾಧ್ಯಕ್ಷೆ ದೇವಕಿ, ಬ್ರಹ್ಮಾವರ ತಾಲೂಕು ಅಧ್ಯಕ್ಷ ಸ್ಟಾನಿ ಡಿಸೋಜ, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ಜ್ಯೋತಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅಲ್ಫೋನ್ಸ್, ಜಿಲ್ಲಾ ಸಂಸ್ಕೃತಿಕ ಕಾರ್ಯದರ್ಶಿ ಕೃಷ್ಣಕುಮಾರ್, ಜಿಲ್ಲಾ ಮಹಿಳಾ ಕಾರ್ಯದರ್ಶಿ ಚಂದ್ರಕಲಾ, ಜಿಲ್ಲಾ ಮಹಿಳಾ ಜಾಲತಾಣ ಸಂಚಾಲಕಿ ರಶ್ಮಿ, ಜಿಲ್ಲಾ ಸದಸ್ಯರಾದ ಅಶೋಕ್ ಮಲ್ಲು, ಉಪಸ್ಥಿತರಿದ್ದರು.