ಪ್ರವಾಸೋದ್ಯಮ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

Update: 2024-12-18 14:41 GMT

ಉಡುಪಿ: ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ರಾಜ್ಯ ಹಾಗೂ ಕೇಂದ್ರ ಸರಕಾರಗಳ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಫ್ಟ್ ಇನ್‌ಸ್ಟಿಟೂಟ್ (ಎಫ್‌ಸಿಐ) ಮೈಸೂರು ಹಾಗೂ ಇನ್‌ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ (ಐಎಚ್‌ಎಂ) ಬೆಂಗಳೂರು ಇವರ ಮೂಲಕ ವಸತಿ ಸಹಿತ ಜಾರಿಗೊಳಿಸಲು ಉದ್ದೇಶಿಸಿದ್ದು, ರಾಜ್ಯಾದ್ಯಂತ 20ರಿಂದ 45 ವರ್ಷದೊಳಗಿನ ಪರಿಶಿಷ್ಟ ಜಾತಿಗೆ ಸೇರಿದ 292 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಂದ ತರಬೇತಿ ಕಾರ್ಯಕ್ರಮಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ತರಬೇತಿ ವಿವರ: ಫುಡ್ ಮತ್ತು ಬಿವರೇಜ್ ಸರ್ವೀಸ್ ಸ್ಟೀವರ್ಡ್ ತರಬೇತಿಗೆ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳ ಗುರಿ -100 ಹಾಗೂ ಪರಿಶಿಷ್ಟ ಪಂಗಡದ- 49 ಅಭ್ಯರ್ಥಿಗಳ ಗುರಿ ನಿಗದಿಪಡಿಸಲಾಗಿದ್ದು, ಕನಿಷ್ಟ ಎಸೆಸೆಲ್ಸಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ರೂಮ್ ಅಟೆಂಡೆಂಟ್ ತರಬೇತಿಗೆ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳ ಗುರಿ -30 ಹಾಗೂ ಪರಿಶಿಷ್ಟ ಪಂಗಡದ- 19 ಅಭ್ಯರ್ಥಿಗಳ ಗುರಿ ನಿಗದಿ ಪಡಿಸಲಾಗಿದ್ದು, ಕನಿಷ್ಟ ಐದನೇ ತರಗತಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ಫ್ರಂಟ್ ಆಫೀಸ್ ಅಸೋಸಿಯೇಟ್ ತರಬೇತಿಗೆ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳ ಗುರಿ - 15 ಹಾಗೂ ಪರಿಶಿಷ್ಟ ಪಂಗಡದ - 5 ಅಭ್ಯರ್ಥಿಗಳ ಗುರಿ ನಿಗದಿಯಾಗಿದ್ದು, ಕನಿಷ್ಠ ದ್ವಿತೀಯ ಪಿಯುಸಿ ಉತ್ತೀರ್ಣರಾದವರು ಅರ್ಜಿ ಹಾಕಬಹುದು. ಮಲ್ಟಿ ಕ್ಯೂಸೈನ್ ಕುಕ್ ತರಬೇತಿಗೆ ಪರಿಶಿಷ್ಟ ಜಾತಿ ಅಭ್ಯರ್ಥಿಗಳ ಗುರಿ- 147 ಹಾಗೂ ಪರಿಶಿಷ್ಟ ಪಂಗಡದ - 89 ಅಭ್ಯರ್ಥಿಗಳ ಗುರಿ ನಿಗದಿಪಡಿಸಲಾಗಿದ್ದು, ಕನಿಷ್ಠ ಎಂಟನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಜಿಲ್ಲೆಯಲ್ಲಿ ಮೇಲಿನ ತರಬೇತಿ ಪಡೆಯಲು ಆಸಕ್ತಿ ಹೊಂದಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಡಿಸೆಂಬರ್ 28 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ಮಣಿಪಾಲ ಇವರನ್ನು ಸಂಪರ್ಕಿಸ ಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News