ಅಂತಾರಾಷ್ಟ್ರೀಯ ಸಮ್ಮೇಳನ- ವಿದ್ಯಾರ್ಥಿ ವಿಚಾರ ಸಂಕಿರಣ
ಶಿರ್ವ, ಡಿ.20: ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಎರಡು ದಿನಗಳ ಕಾಲ ಹಮ್ಮಿಕೊ ಳ್ಳಲಾದ ಕಂಪ್ಯೂಟೇಷನಲ್ ಇಂಟೆಲಿಜೆನ್ಸ್ ಮತ್ತು ಸ್ಮಾರ್ಟ್ ಕಮ್ಯುನಿಕೇಷನ್ ಮತ್ತು ಮೆಟೀರಿಯಲ್, ಎನರ್ಜಿ, ಎನ್ವಿರಾನ್ಮೆಂಟ್ ಮತ್ತು ಮ್ಯಾನ್ಯುಫಾಕ್ಚ್ಚರಿಂಗ್ ಎಂಬ ವಿಷಯದ ಕುರಿತು ಅಂತಾರಾಷ್ಟ್ರೀಯ ಸಮ್ಮೇಳನ ಮತ್ತು ವಿದ್ಯಾರ್ಥಿ ವಿಚಾರ ಸಂಕಿರಣವನ್ನು ಬೆಂಗಳೂರು ಕೌನ್ಸಿಲ್ ಆಫ್ ಸೈಂಟಿಫಿಕ್ ಆ್ಯಂಡ್ ಇಂಡಸ್ಟ್ರೀಯಲ್ ರಿಸರ್ಚ್‌ನ ಹಿರಿಯ ವಿಜ್ಞಾನಿ ಡಾ ಕೃಷ್ಣಚಂದ್ರ ಗೌಡ ಶುಕ್ರವಾರ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಜಾಗತಿಕ ಸವಾಲುಗಳಾದ ಸುಸ್ಥಿರತೆ, ಇಂಧನ ದಕ್ಷತೆ ಮತ್ತು ತಾಂತ್ರಿಕ ಆವಿಷ್ಕಾರಗಳನ್ನು ಎದುರಿಸುವಲ್ಲಿ ಸಮ್ಮೇಳನಗಳು ಸಾಕಷ್ಟು ಮಹತ್ವದ್ದಾಗಿದೆ. ಇಂತಹ ಸಮ್ಮೇಳನಗಳು ಪ್ರಭಾವಶಾಲಿಯಾದ ಸಂಶೋಧನೆಗಳನ್ನು ಪ್ರೇರೇಪಿಸಿ, ಅರ್ಥಪೂರ್ಣ ಪರಿಹಾರಗಳನ್ನು ನೀಡುತ್ತದೆ ಎಂದು ಹೇಳಿದರು.
ಸೋದೆ ವಾದಿರಾಜ ಮಠ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರತ್ನಕುಮಾರ್ ಮಾತನಾಡಿದರು. ಈ ಸಂದರ್ಭದಲ್ಲಿ ಸಮ್ಮೇಳ ನದ ಕಿರುಪುಸ್ತಕವನ್ನು ಬಿಡುಗಡೆ ಗೊಳಿಸಲಾಯಿತು. ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲ ಡಾ.ತಿರುಮಲೇಶ್ವರ ಭಟ್ ವಹಿಸಿದ್ದರು.
ಮೆಕ್ಯಾನಿಕಲ್ ವಿಭಾಗದ ಪ್ರಾಧ್ಯಾಪಕ ಡಾ.ಮಂಜುನಾಥ್ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಕಂಪ್ಯೂಟರ್ ಸೈನ್ಸ್ ವಿಭಾಗದ ಡಾ.ಭಾರತಿ ಪಂಜ್ವಾನಿ ವಂದಿಸಿದರು. ಸೌಮ್ಯ ಭಟ್ ಕಾರ್ಯಕ್ರಮ ನಿರೂಪಿಸಿದರು.