ಅಂಬರ್‌ಗ್ರೀಸ್ ಪ್ರಕರಣ: ನಾಲ್ವರ ಬಂಧನ
Update: 2024-12-21 15:55 GMT
ಕುಂದಾಪುರ, ಡಿ.21: ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್) ಮಾರಾಟ ಜಾಲದ ಶಂಕೆಯ ಹಿನ್ನೆಲೆಯಲ್ಲಿ ಕೋಡಿ ಸಮೀಪದ ಎಂಕೋಡಿಯ ಸೌಹಾರ್ದ ಭವನದಲ್ಲಿ ಕಾರ್ಯಾಚರಣೆ ನಡೆಸಿದ್ದ ಅರಣ್ಯ ಸಂಚಾರಿ ದಳದ (ಫಾರೆಸ್ಟ್ ಸಿಐಡಿ) ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ಪೈಕಿ ನಾಲ್ವರನ್ನು ಕುಂದಾಪುರ ಪೊಲೀಸರನ್ನು ಬಂಧಿಸಿದ್ದಾರೆ.
ಆರೋಪಿಗಳಾದ ಕೋಡಿ ನಿವಾಸಿಗಳಾದ ಅಬೂಬಕ್ಕರ್ (50), ಹಸೈನಾರ್ (57), ಉಬದುಲ್ಲಾ (40) ಹಾಗೂ ಬೈಂದೂರಿನ ಅಲಿ (50) ಬಂಧಿತರು. ಇವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.