‘ಕಟ್ಟಡಗಳ ತ್ಯಾಜ್ಯ ನೀರನ್ನು ಮಳೆ ನೀರು ಹರಿಯುವ ಚರಂಡಿಗಳಿಗೆ ಬಿಡುತ್ತಿರುವವರ ವಿರುದ್ಧ ಶಿಸ್ತು ಕ್ರಮ’

Update: 2024-12-22 13:07 GMT

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಮಳೆ ನೀರು ಹರಿಯುವ ಚರಂಡಿಗಳಿಗೆ ವಸತಿ ಸಮುಚ್ಚಯ, ಹೋಟೆಲ್ ಇತ್ಯಾದಿ ವಾಣಿಜ್ಯ ಸಂಕೀರ್ಣಗಳ ಕೊಳಚೆ ನೀರನ್ನು ಅನಧಿಕೃತವಾಗಿ ಬಿಡುತ್ತಿರುವುದು ಕಂಡುಬಂದಿದ್ದು, ಇದರಿಂದ ಕಲುಷಿತ ನೀರು ಕುಡಿಯುವ ನೀರಿನ ಮೂಲಗಳಿಗೆ, ನೆರೆಹೊರೆಯ ಬಾವಿಗಳ ನೀರು ಹಾಳಾಗುತ್ತಿದ್ದು, ನೈರ್ಮಲ್ಯಕ್ಕೂ ತೊಂದರೆಯುಂಟಾಗುತ್ತಿದೆ.

ನಗರಸಭಾ ವ್ಯಾಪ್ತಿಯಲ್ಲಿ ಇರುವ ವಸತಿ ಸಮುಚ್ಚಯ, ಹೋಟೆಲ್, ಇತ್ಯಾದಿ ವಾಣಿಜ್ಯ ಸಂಕೀರ್ಣಗಳ ಮಾಲಕರು ತಮ್ಮ ಕಟ್ಟಡದ ಕಲುಷಿತ ನೀರನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ವ್ಯವಸ್ಥೆ ಮಾಡಿಕೊಳ್ಳಬೇಕು. ಯಾವುದೇ ಕಟ್ಟಡ ಮಾಲಕರು ತಮ್ಮ ಕಟ್ಟಡದ ಕೊಳಚೆ ನೀರನ್ನು, ಮಳೆ ನೀರು ಹರಿಯುವ ಚರಂಡಿಗೆ ಬಿಡುತ್ತಿರುವುದು ಕಂಡು ಬಂದರೆ ಆ ಕಲುಷಿತ ನೀರಿನ ಮೂಲವನ್ನು ತಡೆದು ಅಂತಹ ಕಟ್ಟಡ ಮಾಲಕರ ವಿರುದ್ಧ ಜಲ ಮಾಲಿನ್ಯ ತಡೆ ಕಾಯ್ದೆ ಅನ್ವಯ ಕಾನೂನು ಕ್ರಮ ಜರುಗಿಸಲಾಗುವುದು ಹಾಗೂ 5000 ರೂ. ದಂಡ ವಿಧಿಸಿ ಆ ಕಟ್ಟಡಗಳ ಮೂಲಭೂತ ಸೌಕರ್ಯಗಳನ್ನು ಕಡಿತ ಗೊಳಿಸಲಾಗುವುದು ಎಂದು ಪೌರಾಯುಕ್ತರು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News