ಸಾಲಿಗ್ರಾಮ ಪ.ಪಂ: ಸ್ವಚ್ಛತಾ ರಾಯಭಾರಿಗಳ ನೇಮಕ

Update: 2024-12-23 15:01 GMT

ಉಡುಪಿ, ಡಿ.23: ಸಾಲಿಗ್ರಾಮ ಪಟ್ಟಣ ಪಂಚಾಯತ್ ಸ್ವಚ್ಛ ಭಾರತ್ ಮಿಷನ್, ಸ್ವಚ್ಛ ಸರ್ವೇಕ್ಷಣಕ್ಕೆ ಸಂಬಂಧಿಸಿದಂತೆ ಕೋಟ ವಿವೇಕ ಬಾಲಕಿಯರ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಶ್ರೀಪತಿ ಹೇರ್ಳೆ ಹಾಗೂ ಮಣೂರು ಶ್ರೀರಾಮಪ್ರಸಾದ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಜಿ.ರಾಮಚಂದ್ರ ಐತಾಳ್ ಇವರನ್ನು ಸ್ವಚ್ಛತಾ ರಾಯಭಾರಿಗಳಾಗಿ ನೇಮಕ ಮಾಡಲಾಗಿದೆ.

ಇವರು ಸ್ವಚ್ಛತೆಯ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಾಗಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸಲಿದ್ದಾರೆ. ಸ್ವಚ್ಛತೆ, ಆರೋಗ್ಯದ ಮಹತ್ವ, ಮುಂದಿನ ದಿನಗಳಲ್ಲಿ ಸ್ವಚ್ಛತೆಯ ಬಗ್ಗೆ ಕೈಗೊಳ್ಳಬಹುದಾದ ಉಪಕ್ರಮಗಳ ಬಗ್ಗೆ ವಿಶೇಷ ಉಪನ್ಯಾಸ ಗಳನ್ನು ಸಮಯ ಸಂದರ್ಭಗಳಲ್ಲಿ ಸಮಯೋಚಿತ ವಾಗಿ ನೀಡಲಿದ್ದಾರೆ ಎಂದು ಸಾಲಿಗ್ರಾಮ ಪಟ್ಟಣ ಪಂಚಾಯತ್ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News