ಕೊಡಪಾನ ತೆಗೆಯಲು ಬಾವಿಗೆ ಇಳಿದ ವ್ಯಕ್ತಿ ಮೃತ್ಯು
Update: 2024-12-23 15:36 GMT
ಮಣಿಪಾಲ, ಡಿ.23: ಕೊಡಪಾನ ತೆಗೆಯಲು ಬಾವಿಗೆ ಇಳಿದ ವ್ಯಕ್ತಿಯೊಬ್ಬರು ಅಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಡಿ.23ರಂದು ಮಧ್ಯಾಹ್ನ ವೇಳೆ ಸರಳೆಬೆಟ್ಟುವಿನ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಬಳಿ ನಡೆದಿದೆ.
ಮೃತರನ್ನು ಸರಳಬೆಟ್ಟು ನಿವಾಸಿ ಕೂಲಿ ಕಾರ್ಮಿಕ ಶಿವ ನಾಯ್ಕ್(50) ಎಂದು ಗುರುತಿಸಲಾಗಿದೆ. ಇವರು ನೆರೆಕರೆಯ ಕಲ್ಯಾಣಿ ಎಂಬವರ ಬಾವಿಯಲ್ಲಿ ಬಿದ್ದಿರುವ ಕೊಡಪಾನವನ್ನು ತೆಗೆಯಲು ಬಾವಿಗೆ ಇಳಿಯುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದರೆನ್ನಲಾಗಿದೆ.
ತೀವ್ರವಾಗಿ ಅಸ್ವಸ್ಥಗೊಂಡ ಅವರನ್ನು ಅಗ್ನಿ ಶಾಮಕ ದಳದವರ ಮೇಲಕ್ಕೇತ್ತಿ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಮಣಿಪಾಲದ ಹೋಟೆಲ್‌ನಲ್ಲಿ ಕೆಲಸ ಮಾಡಿ ಕೊಂಡಿದ್ದ ಇವರು, ಪತ್ನಿ, ಓರ್ವ ಪುತ್ರನನ್ನು ಅಗಲಿದ್ದಾರೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.