ಗಂಗೊಳ್ಳಿ ಗ್ರಾಪಂ ಅಧ್ಯಕ್ಷರ ಆಯ್ಕೆ: ಚುನಾವಣಾಧಿಕಾರಿ ನೇಮಕ

Update: 2024-12-24 15:40 GMT

ಉಡುಪಿ, ಡಿ.24: ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಪಂಗೆ ಸಂಬಂಧಿಸಿದಂತೆ, ಕರ್ನಾಟಕ ಪಂಚಾಯತ್ ರಾಜ್ (ಗ್ರಾಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ) ನಿಯಮ 1995ರ ನಿಯಮ (3) ಹಾಗೂ ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 45(1) ರಂತೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಗಂಗೊಳ್ಳಿ ಗ್ರಾಪಂನ ಮೊದಲ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಆಯ್ಕೆ ಮಾಡುವ ಸಲುವಾಗಿ ಕುಂದಾಪುರ ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಅರುಣ್‌ಕುಮಾರ್ ಶೆಟ್ಟಿ (ಮೊ.ನಂ:9449143880) ಇವರನ್ನು ಗೊತ್ತು ಪಡಿಸಿದ ಅಧಿಕಾರಿಯಾಗಿ ನೇಮಕ ಮಾಡಿ ಅಪರ ಜಿಲ್ಲಾಧಿಕಾರಿ ಮಮತಾ ದೇಇ ಜಿ.ಎಸ್ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News