ಯುವನಿಧಿ ಯೋಜನೆಗೆ ನೋಂದಣಿ ಪ್ರಾರಂಭ

Update: 2024-12-24 15:43 GMT

ಉಡುಪಿ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಗಳಲ್ಲಿ ಒಂದಾದ ಯುವನಿಧಿ ಯೋಜನೆಯ 2024ರ ನೋಂದಣಿ ಪ್ರಕ್ರಿಯೆಯ ಪ್ರಾರಂಭದ ಪೋಸ್ಟರ್ ಹಾಗೂ ಬ್ಯಾನರನ್ನು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಮಣಿಪಾಲದ ತಮ್ಮ ಕಚೇರಿ ಸಭಾಂಗಣದಲ್ಲಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಉಪ ಕೃಷಿ ನಿರ್ದೇಶಕ ಚಂದ್ರಶೇಖರ್ ನಾಯ್ಕ್, ಇಲಾಖೆಯ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ಯುವನಿಧಿ ಯೋಜನೆಯಡಿ ನಿರುದ್ಯೋಗಿ ಪದವಿ ಹಾಗೂ ಸ್ನಾತಕೋತ್ತರ ಪದವೀಧರರಿಗೆ 3000 ರೂ. ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ 1500 ರೂ.ಗಳನ್ನು ಪ್ರತಿ ತಿಂಗಳು ನಿರುದ್ಯೋಗಿ ಭತ್ಯೆಯಾಗಿ ನೀಡಲಾಗುತ್ತದೆ.

ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ನೊಂದಣಿಗೆ ಅಗತ್ಯವಿರುವ ದಾಖಲೆಗಳೊಂದಿಗೆ ಹೆಸರನ್ನು ಸೇವಾ ಸಿಂಧು ಪೋರ್ಟಲ್ -https://sevasindhugs.karnataka.gov.in-ನಲ್ಲಿ ನೋಂದಾಯಿಸಿಕೊಳ್ಳ ಬಹುದು. ಅರ್ಹ ಅಭ್ಯರ್ಥಿಗಳು ಪ್ರತಿ ತಿಂಗಳ 25ನೇ ತಾರೀಕಿನೊಳಗೆ ತಾನು ನಿರುದ್ಯೋಗಿ ಎಂಬುದನ್ನು ಕಡ್ಡಾಯವಾಗಿ ಸ್ವಯಂ ಘೋಷಣೆ ನೀಡಬೇಕು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News