ಬೈಂದೂರು ಪಟ್ಟಣ ಪಂಚಾಯತ್: ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಪ್ರತ್ಯೇಕ ಪರವಾನಗಿ
Update: 2024-12-25 15:02 GMT
ಉಡುಪಿ, ಡಿ.25: ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಎಲ್ಲಾ ತಂಬಾಕು ಉತ್ಪನ್ನಗಳ ಮಾರಾಟಗಾರರು, ಕಡ್ಡಾಯ ವಾಗಿ ಪ್ರತ್ಯೇಕ ಪರವಾನಿಗೆ ಪಡೆದು ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಬೇಕು ಮತ್ತು ಶಾಲಾ ಆವರಣ ದಿಂದ ಕನಿಷ್ಟ 100ಮೀ. ಅಂತರದಲ್ಲಿ ಯಾವುದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದನ್ನು ಕೋಟ್ಪಾ 2003ರ ಕಾಯಿದೆ ಯಂತೆ ನಿಷೇಧಿಸಲಾಗಿದ್ದು, ತಂಬಾಕು ಉತ್ಪನ್ನಗಳ ಮಾರಾಟ ಕಂಡುಬಂದಲ್ಲಿ ಉದ್ದಿಮೆ ಪರವಾನಿಗೆ ರದ್ದುಪಡಿಸಿ, ದಂಡ ವಿಧಿಸಿ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಬೈಂದೂರು ಪಟ್ಟಣ ಪಂಚಾಯತ್‌ನ ಮುಖ್ಯಾಧಿ ಕಾರಿಯವರ ಕಚೇರಿ ಪ್ರಕಟಣೆ ತಿಳಿಸಿದೆ.