ಸಮಗ್ರ ಕೃಷಿ ಪದ್ಧತಿ ತರಬೇತಿ

Update: 2024-12-26 14:39 GMT

ಉಡುಪಿ, ಡಿ.26: ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ಮತ್ತು ರಾಷ್ಟ್ರೀಯ ಕೃಷಿ ವಿಸ್ತರಣೆ ನಿರ್ವಹಣಾ ಸಂಸ್ಥೆ ಹೈದರಾಬಾದ್ ಇವರ ಸಹಯೋಗದಲ್ಲಿ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಅಥವಾ ಆಸಕ್ತಿ ಇರುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಸಮಗ್ರ ಕೃಷಿ ಪದ್ಧತಿಯಲ್ಲಿ 5 ದಿನಗಳ ಕಾಲ ತರಬೇತಿಯನ್ನು 2025ರ ಜನವರಿ 7ರಿಂದ 11ರವರೆಗೆ ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರ ದಲ್ಲಿ ಆಯೋಜಿಸಲಾಗಿದೆ.

ಆಸಕ್ತ ಪುರುಷ ಅಥವಾ ಮಹಿಳಾ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರ, ಕೃಷಿ ಭೂಮಿಯ ಪಹಣಿ ಮತ್ತು ಆಧಾರ್ ಕಾರ್ಡ್ ಪ್ರತಿಯನ್ನು ವಾಟ್ಸಪ್ ನಂಬರ್ -9972247539ಗೆ ಕಳುಹಿಸಬಹುದು. ಜನವರಿ 5ರ ಒಳಗೆ ಬರುವ ಮೊದಲ 40 ಅರ್ಜಿ ಗಳಿಗೆ ಮಾತ್ರ ತರಬೇತಿಯಲ್ಲಿ ಭಾಗವಹಿಸಲು ಅವಕಾಶವಿದ್ದು, ಹೆಚ್ಚಿನ ಮಾಹಿತಿಗೆ ಮೇಲ್ಕಂಡ ವಾಟ್ಸಪ್ಪ್ ನಂಬರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News