ಕೇಂದ್ರೀಯ ವಿದ್ಯಾಲಯದಲ್ಲಿ ಶಾಲಾ ವಾರ್ಷಿಕ ದಿನ

Update: 2024-12-27 12:38 GMT

ಉಡುಪಿ, ಡಿ.27: ಉಡುಪಿಯ ಕೇಂದ್ರೀಯ ವಿದ್ಯಾಲಯದ ವಾರ್ಷಿಕ ದಿನಾಚರಣೆಯು ಡಿ.23ರಂದು ನಡೆಯಿತು.

ಕಾರ್ಯಕ್ರಮವನ್ನು ಪ್ರಾಂಶುಪಾಲ ಕರೀಂಖಾನ್ ಉದ್ಘಾಟಿಸಿ, ವಾರ್ಷಿಕ ವರದಿ ಮಂಡಿಸಿದರು. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಅನಿತಾ ಮಡ್ಲೂರು, ಕೆನರಾ ಬ್ಯಾಂಕ್‌ನ ಎಜಿಎಂ ಸಂಜೀವ್ ಕುಮಾರ್, ಮಣಿಪಾಲ ಪೊಲೀಸ್ ನಿರೀಕ್ಷಕ ದೇವರಾಜ್, ವಿಎಂಸಿ ಸದಸ್ಯೆ ಅಂಬಿಕಾ ರಣಾಬ್ ಭಾಗವಹಿಸಿದ್ದರು.

ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ನಂತರ ವರ್ಷವಿಡೀ ನಡೆದ ವಿವಿಧ ಸಿಸಿಎ(ಸಹ ಪಠ್ಯಕ್ರಮ ಚಟುವಟಿಕೆಗಳು) ಸ್ಪರ್ಧೆಗಳ ವಿಜೇತರನ್ನು ಘೋಷಿಸಲಾಯಿತು ಮತ್ತು ಶೇ.100 ಹಾಜರಾತಿ ಹೊಂದಿರುವ ವಿದ್ಯಾರ್ಥಿಗಳು ಮತ್ತು ಶಾಲಾ ಕಾರ್ಯಕ್ರಮಗಳನ್ನು ಸಕ್ರಿಯವಾಗಿ ಬೆಂಬಲಿಸಿದ ವಿದ್ಯಾರ್ಥಿಗಳಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಲಾಯಿತು.

ಇಂಗ್ಲಿಷ್ ಶಿಕ್ಷಕ ವಸಂತ ಪದ್ಮಶಾಲಿ ಸ್ವಾಗತಿಸಿದರು. ಶಿಕ್ಷಕ ರಾಗೇಶ್ ವಂದಿಸಿದರು

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News