ಹಕ್ಲಾಡಿಯಲ್ಲಿ ಕಿಶೋರ ಯಕ್ಷಗಾನ ಸಂಭ್ರಮ ಉದ್ಘಾಟನೆ

Update: 2024-12-27 14:00 GMT

ಬೈಂದೂರು, ಡಿ.27: ಹಕ್ಲಾಡಿ ಶ್ರೀ ಕೆ.ಎಸ್.ಎಸ್. ಸರಕಾರಿ ಪ್ರೌಢಶಾಲಾ ವಠಾರದಲ್ಲಿ ಹಮ್ಮಿಕೊಳ್ಳಲಾಗಿರುವ ಎರಡು ದಿನಗಳ ನಾಲ್ಕು ಪ್ರೌಢಶಾಲೆಗಳ ಕಿಶೋರ ಯಕ್ಷಗಾನ ಸಂಭ್ರಮವನ್ನು ಗುರುವಾರ ಕಂದಾವರ ರಘುರಾಮ ಶೆಟ್ಟಿ ಉದ್ಘಾಟಿಸಿದರು.

ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅಧ್ಯಕ್ಷತೆ ವಹಿಸಿದ್ದರು. ಹಕ್ಲಾಡಿ ಗ್ರಾಪಂ ಉಪಾಧ್ಯಕ್ಷ ಸುಭಾಷ್ ಶೆಟ್ಟಿ ಹೊಳ್ಮಗೆ, ಹಕ್ಲಾಡಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಸಂಗೀತ ಸಂತೋಷ ಮೊಗವೀರ, ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್, ಬಗ್ವಾಡಿ ನಿವೃತ್ತ ಶ್ರೇಣಿ ಮುಖ್ಯೋಪಾಧ್ಯಾಯ ರಾಜೀವ ಶೆಟ್ಟಿ, ತಲ್ಲೂರು ಸರಕಾರಿ ಪ್ರೌಢಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಮುಹಮ್ಮದ್ ಅಸ್ಲಾಂ, ಬೈಂದೂರು ಯಕ್ಷ ಗುರುಕುಲ ಸಂಚಾಲಕ ಸುನೀಲ್ ಹೊಲಾಡು, ಹಕ್ಲಾಡಿ ಚನ್ನಕೇಶವ ಲಯನ್ಸ್ ಕ್ಲಬ್ ಅಧ್ಯಕ್ಷ ಡಾ.ಕಿಶೋರ ಕುಮಾರ ಶೆಟ್ಟಿ ಮುಖ್ಯ ಅತಿಥಿಯಾಗಿದ್ದರು.

ಯಕ್ಷಗಾನ ಕಲಾರಂಗದ ಉಪಾಧ್ಯಕ್ಷ ವಿ.ಜಿ. ಶೆಟ್ಟಿ, ಎಚ್. ಎನ್. ಶೃಂಗೇಶ್ವರ, ಗಣೇಶ್ ಬ್ರಹ್ಮಾವರ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ಮಂಜುನಾಥ ಎಸ್. ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮ ನಿರೂಪಿಸಿದರು.

ಸಭೆಯ ಬಳಿಕ ತಲ್ಲೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ, ಪ್ರಭಾಕರ್ ಆಚಾರ್ ನಿರ್ದೇಶನದಲ್ಲಿ ಭೀಷ್ಮ ವಿಜಯ ಮತ್ತು ಹಕ್ಲಾಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಪ್ರದೀಪ ಶೆಟ್ಟಿ ನಾರ್ಕಳಿ ನಿರ್ದೇಶನದಲ್ಲಿ ಹಿರಣ್ಯಾಕ್ಷ ವಧೆ ಭಕ್ತ ಪ್ರಹ್ಲಾದ ಯಕ್ಷಗಾನ ಪ್ರದರ್ಶನಗೊಂಡವು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News