ಯೋಧ ಅನೂಪ್ ಮನೆಗೆ ಜಯಪ್ರಕಾಶ್ ಹೆಗ್ಡೆ, ಐವನ್ ಡಿಸೋಜ ಭೇಟಿ

Update: 2024-12-28 14:04 GMT

ಕುಂದಾಪುರ, ಡಿ.28: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ವಾಹನ ಕಣಿವೆಗೆ ಉರುಳಿ ಮೃತಪಟ್ಟ ಯೋಧ ಕೋಟೇಶ್ವರ ಬೀಜಾಡಿಯ ಅನೂಪ್ ಪೂಜಾರಿ ನಿವಾಸಕ್ಕೆ ಶನಿವಾರ ಮಾಜಿ ಸಂಸದ ಕೆ.ಜಯಪ್ರಕಾಶ ಹೆಗ್ಡೆ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಭೇಟಿ ನಿಡಿ ಕುಟುಂಬದವರಿಗೆ ಸಾಂತ್ವಾನ ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಮೃತ ಯೋಧ ಅನೂಪ್ ಪೂಜಾರಿ ಕುಟುಂಬ ಬಡತನದಲ್ಲಿದ್ದು ಸೂಕ್ತ ಪರಿಹಾರ ನೀಡಲು ಸರಕಾರದ ಗಮನಕ್ಕೆ ತರಲಾಗುತ್ತಿದೆ. ಪತ್ನಿ ಪದವಿಧರೆ ಯಾಗಿದ್ದು ಅವರಿಗೆ ಸರಕಾರಿ ನೌಕರಿ ಕೊಡಿಸುವ ಬಗ್ಗೆ ಮುಖ್ಯಮಂತ್ರಿಗಳ ಬಳಿ ಮಾತನಾಡಲಾಗುವುದು ಎಂದರು.

ಜಿಲ್ಲೆಯ ವಿವಿಧ ಸರಕಾರಿ ಆಸ್ಪತ್ರೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಖಾಲಿ ಹುದ್ದೆಗಳ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದ್ದು ತುರ್ತು ಗುತ್ತಿಗೆ ಅಧಾರದ ನೌಕರಿ ಕೊಡಿಸಿ ಮುಂದಿನ ದಿನದಲ್ಲಿ ಖಾಯಂ ಹುದ್ದೆ ನೇಮಕಾತಿ ಮಾಡಿಸುವ ಬಗ್ಗೆ ಕ್ರಮ ವಹಿಸಲಾಗುತ್ತದೆ ಎಂದು ಅವರು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿ, ಮೃತ ಯೋಧನ ಕುಟುಂಬ ಆರ್ಥಿಕವಾಗಿ ಹಿಂದುಳಿದಿದೆ. ಮೃತರ ಪುಟ್ಟ ಮಗುವಿನ ಭವಿಷ್ಯದ ಹಿತದೃಷ್ಟಿಯಿಂದ ಪತ್ನಿಗೆ ಸರಕಾರಿ ಉದ್ಯೋಗ ನೀಡುವ ಬಗ್ಗೆ ಮುಖ್ಯ ಮಂತ್ರಿಗಳಿಗೆ ಮನವಿ ನೀಡಲಾಗುತ್ತದೆ. ಈ ಕುಟುಂಬದ ಜೊತೆ ಸರಕಾರ ನಿಲ್ಲುತ್ತದೆ ಎಂದು ತಿಳಿಸಿದರು.

ಸಾಮಾಜಿಕ ಕಾರ್ಯಕರ್ತ ಅಶೋಕ್ ಪೂಜಾರಿ ಬೀಜಾಡಿ, ಮುಖಂಡ ರಾದ ಮಲ್ಯಾಡಿ ಶಿವರಾಮ ಶೆಟ್ಟಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ಬಿ.ಹೆರಿಯಣ್ಣ ಮೊದಲಾದವರು ಉಪಸ್ಥಿತರಿದ್ದರು.

ಪ್ರಮೋದ್ ರಿಂದ ಆರ್ಥಿಕ ನೆರವು

ಜಮ್ಮು ಕಾಶ್ಮೀರದಲ್ಲಿ ಹುತಾತ್ಮರಾದ ಯೋಧ ಕುಂದಾಪುರದ ಅನೂಪ್ ಪೂಜಾರಿ ಮನೆಗೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಶನಿವಾರ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಇದೇ ವೇಳೆ ಅವರು ತನ್ನ ವೈಯಕ್ತಿಕ ನೆಲೆಯಲ್ಲಿ ಅನೂಪ್ ಕುಟುಂಬಕ್ಕೆ 1 ಲಕ್ಷ ಮೊತ್ತದ ಆರ್ಥಿಕ ನೆರವು ನೀಡಿದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News