ವಡ್ಡರ್ಸೆ ರಘುರಾಮ್ ಶೆಟ್ಟಿ ಪ್ರಶಸ್ತಿಗೆ ರವಿ ಹೆಗಡೆ ಆಯ್ಕೆ
Update: 2024-12-28 14:47 GMT
ಉಡುಪಿ, ಡಿ.28: ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ ಆಶ್ರಯದಲ್ಲಿ ಕೊಡಮಾಡುವ 2024ನೇ ಸಾಲಿನ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಕನ್ನಡಪ್ರಭಾ ಪತ್ರಿಕೆಯ ಪ್ರಧಾನ ಸಂಪಾದಕ, ಹಿರಿಯ ಪತ್ರಕರ್ತ ರವಿ ಹೆಗಡೆ ಆಯ್ಕೆಯಾಗಿದ್ದಾರೆ.
ಪತ್ರಿಕೋದ್ಯಮ ಕ್ಷೇತ್ರದಲ್ಲಿ ನಿರಂತರ ಸೇವೆ ಸಲ್ಲಿಸಿದ ಗಣ್ಯರಿಗೆ ಬ್ರಹ್ಮಾವರ ಪತ್ರಕರ್ತರ ಸಂಘವು ವಡ್ಡರ್ಸೆಯವರ ಹೆಸರಿ ನಲ್ಲಿ ಈ ಪ್ರಶಸ್ತಿಯನ್ನು ನೀಡುತ್ತ ಬಂದಿದೆ. ಜ.11ರಂದು ಸಂಜೆ 5ಗಂಟೆಗೆ ಬ್ರಹ್ಮಾವರ ಬಂಟರ ಭವನದಲ್ಲಿ ಗಣ್ಯರ ಉಪಸ್ಥಿತಿ ಯಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಸಂಘ ಪ್ರಕಟನೆ ತಿಳಿಸಿದೆ.