ಮೀಫ್ ವತಿಯಿಂದ ಕುಂದಾಪುರ ತಾಲೂಕು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರ
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ಮೀಫ್) ಮತ್ತು ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್ ಕೋಡಿ ಕುಂದಾಪುರ ಇವುಗಳ ಆಶ್ರಯದಲ್ಲಿ ಮೀಫ್ ವತಿಯಿಂದ ಕುಂದಾಪುರ ತಾಲೂಕು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರ ಶನಿವಾರ ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್ ಕೋಡಿಯಲ್ಲಿ ನಡೆಯಿತು.
ಕಾರ್ಯಾಗಾರದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮೋಟಿವೇಷನ್, ಕಲಿಕಾ ವಿಧಾನ ಮತ್ತು ಪರೀಕ್ಷಾ ಪೂರ್ವ ಸಿದ್ಧತೆ ಬಗ್ಗೆ ತರಬೇತಿ ನೀಡಲಾಯಿತು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆ ಕೋಡಿ ಇದರ ಅಧ್ಯಕ್ಷ ಕೆ.ಎಂ ಅಬ್ದುಲ್ ರೆಹ್ಮಾನ್ ಬ್ಯಾರಿ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಗಾರವನ್ನು ಉಡುಪಿ ಸೆನ್ ಪೊಲೀಸ್ ಠಾಣೆ ಉಪನಿರೀಕ್ಷಕ ಪವನ್ ನಾಯಕ್ ಉದ್ಘಾಟಿಸಿ, ಇತ್ತೀಚಿಗಿನ ದಿನಗಳಲ್ಲಿ ನಡೆಯುತ್ತಿರುವ ವಿವಿಧ ಸೈಬರ್ ಕ್ರೈಂಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಮೀಫ್ ಅಧ್ಯಕ್ಷ ಮೂಸಬ್ಬ ಪಿ. ಬ್ಯಾರಿ ಜೋಕಟ್ಟೆ ಪ್ರಾಸ್ತಾವಿಕ ವಾಗಿ ಮಾತನಾಡಿದರು.
ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆ ಕೋಡಿ ಇದರ ಟ್ರಸ್ಟಿ ಡಾ. ಆಸಿಫ್ ಬ್ಯಾರಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭಹಾರೈಸಿದರು.
ವೇದಿಕೆಯಲ್ಲಿ ಮೀಫ್ ಉತ್ತರ ವಲಯ ಉಪಾಧ್ಯಕ್ಷ ಶಾಬಿಹ್ ಅಹ್ಮದ್ ಖಾಝಿ, ಕಾರ್ಯಕ್ರಮ ಕಾರ್ಯದರ್ಶಿ ಮೊಹಮ್ಮದ್ ಶಾರಿಕ್, ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್ ಕೋಡಿ ಇದರ ಪಿಟಿಎ ಸಲಹೆಗಾರ ಅಬು ಶೇಖ್, ಪ್ರಾಂಶುಪಾಲೆ ಅಶ್ವಿನಿ ಶೆಟ್ಟಿ, ಡೀನ್ ಡಾ. ಪೂರ್ಣಿಮಾ, ಬ್ಯಾರೀಸ್ ಫಸ್ಟ್ ಗ್ರೇಡ್ ಕಾಲೇಜಿನ ಪ್ರಾಂಶುಪಾಲೆ ಶಬೀನ, ಬಿ. ಎಡ್ ಉಪ ಪ್ರಾಂಶುಪಾಲ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.
ಖ್ಯಾತ ರಾಷ್ಟ್ರೀಯ ತರಬೇತುದಾರರಾದ ಪ್ರೊ. ರಾಜೇಂದ್ರ ಭಟ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಕಾರ್ಯಾಗಾರ ವನ್ನು ನಡೆಸಿಕೊಟ್ಟರು. ಉಪ ಪ್ರಾಂಶುಪಾಲೆ ಜೆನಿಫರ್ ಸ್ವಾಗತಿಸಿ, ಶಿಕ್ಷಕಿ ಎಲಿಟಾ ವಂದಿಸಿದರು. ಶಿಕ್ಷಕಿ ಅಷ್ಫೀನ್ ತಾಜ್ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪುರ, ಗಂಗೊಳ್ಳಿ, ಕಂಡ್ಲೂರು ಪರಿಸರದ 11 ಶಾಲೆಗಳ ಪೈಕಿ 6 ಮತ್ತು ಸರಕಾರಿ ಕನ್ನಡ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 400ರಷ್ಟು ವಿದ್ಯಾರ್ಥಿಗಳು ಭಾಗವಹಿಸಿದ್ದರು.