ಬಂಟಕಲ್ಲು: ಉಚಿತ ದಂತ ಚಿಕಿತ್ಸಾ ಶಿಬಿರ ಉದ್ಘಾಟನೆ
ಶಿರ್ವ: ಜಯಸ್ಮತಿ ಆರೋಗ್ಯ ಟ್ರಸ್ಟ್, ಶ್ರೀಕೃಷ್ಣಛಾಯ ಬಂಟಕಲ್ಲು, ಶಿರ್ವ ಮಹಿಳಾ ಮಂಡಲ, ರೋಟರಿ ಕ್ಲಬ್ ಶಿರ್ವ, ಲಯನ್ಸ್ ಕ್ಲಬ್ ಉಡುಪಿ, ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್ ಘಟಕ, ಶ್ರೀೀಮಧ್ವ ವಾದಿರಾಜ ತಾಂತ್ರಿಕ ವಿದ್ಯಾಲಯ ಬಂಟಕಲ್ಲು, ಶಿರ್ವ ಸಮುದಾಯ ಆರೋಗ್ಯ ಕೇಂದ್ರ ಇವರ ಸಹಭಾಗಿತ್ವದಲ್ಲಿ ಮಣಿಪಾಲ ದಂತ ವೈದ್ಯಕೀಯ ಕಾಲೇಜಿನ ತಜ್ಞ ವೈದ್ಯರಿಂದ ಉಚಿತ ದಂತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಮಂಗಳವಾರ ಬಂಟಕಲ್ಲು ಶ್ರೀಕೃಷ್ಣಛಾಯದಲ್ಲಿ ಏರ್ಪಡಿಸಲಾಗಿತ್ತು.
ಕಾರ್ಯಕ್ರಮವನ್ನು ಶಿರ್ವ ಮಹಿಳಾ ಮಂಡಲ ಅಧ್ಯಕ್ಷೆ ಡಾ.ಸೂರ್ತಿ ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು. ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ದಂತಚಿಕಿತ್ಸಾ ವಿಭಾಗದ ವೈದ್ಯಾಧಿಕಾರಿ ಡಾ.ಗಾಯತ್ರಿ ಸಂತೋಷ್ ದಂತ ಆರೋಗ್ಯದ ರಕ್ಷಣೆ ಹಾಗೂ ಶಿರ್ವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
ಜಯಸ್ಮತಿ ಆರೋಗ್ಯ ಟ್ರಸ್ಟ್ ಬಂಟಕಲ್ಲು ಇದರ ಅಧ್ಯಕ್ಷೆ ಪ್ರಫುಲ್ಲಾ ಜಯಶೆಟ್ಟಿ ಮಾತನಾಡಿದರು. ಶಿರ್ವ ರೋಟರಿಯ ಮಾಜಿ ಅಧ್ಯಕ್ಷ ಡಾ.ವಿಠ್ಠಲ್ ನಾಯಕ್, ಉಡುಪಿ ಲಯನ್ಸ್ ಕ್ಲಬ್ ಅಧ್ಯಕ್ಷ ರವೀಂದ್ರ ಆಚಾರ್ಯ, ಮಣಿಪಾಲ ದಂತ ವೈದ್ಯಕೀಯ ಕಾಲೇಜಿನ ಡಾ.ಜೀವನ್, ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಎಂ.ಸಿ.ಡಿ ವೈದ್ಯಾಧಿಕಾರಿ ಡಾ.ರಿತಿಕಾ ಚಾವ್ಲಾ, ಶಿರ್ವ ಗ್ರಾ.ಪಂ. ಮಾಜಿ ಅಧ್ಯಕ್ಷ ವಾರ್ಡ್ ಪ್ರತಿನಿಧಿ ಕೆ.ಆರ್.ಪಾಟ್ಕರ್, ರೋಟರಿ ಮಾಜಿ ಕಾರ್ಯದರ್ಶಿ ವಿಷ್ಣುಮೂರ್ತಿ ಸರಳಾಯ ಉಪಸ್ಥಿತರಿದ್ದರು.
ಕಾರ್ಯಕ್ರಮ ಸಂಯೋಜಕಿ ಗೀತಾ ವಾಗ್ಲೆ ಸ್ವಾಗತಿಸಿದರು. ವಿದ್ಯಾರ್ಥಿನಿ ವೈಭವಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು. ಸ್ಪೂರ್ತಿ ವಂದಿಸಿದರು.