ವಿಕಲಚೇತನರ ರಿಯಾಯಿತಿ ಬಸ್‌ಪಾಸ್: ಅರ್ಜಿ ಆಹ್ವಾನ
ಉಡುಪಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗದ ವತಿಯಿಂದ ಸಕಾಲ ಸಂಬಂಧಿತ ಸೇವೆಯಾದ ವಿಕಲಚೇತನರ ರಿಯಾಯಿತಿ ಬಸ್ಸುಪಾಸುಗಳನ್ನು ಪಡೆಯಲು ಸೇವಾಸಿಂಧು ಪೋರ್ಟಲ್ - https://sevasindhuservices.karnataka.gov.in- ನಲ್ಲಿ ಅಗತ್ಯ ದಾಖಲಾತಿಗಳನ್ನು ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ವಿಕಲಚೇತನ ಪ್ರಯಾಣಿಕರಿಗೆ ತಮ್ಮ ವಾಸಸ್ಥಳದಿಂದ 100 ಕಿಮೀ. ವ್ಯಾಪ್ತಿಯಲ್ಲಿ ಪ್ರಯಾಣಿಸಲು ರಿಯಾಯಿತಿ ದರದಲ್ಲಿ 2024ನೇ ಸಾಲಿನಲ್ಲಿ ವಿತರಿಸಿರುವ ಬಸ್ಸು ಪಾಸುಗಳ ಅವಧಿಯು 2024ರ ಡಿಸೆಂಬರ್ 31ಕ್ಕೆ ಮುಕ್ತಾಯಗೊಂಡಿದ್ದು, 2025ನೇ ಸಾಲಿಗಾಗಿ ಈ ಬಸ್ಸು ಪಾಸುಗಳನ್ನು ಜನವರಿ 01ರಿಂದ ನವೀಕರಿಸಲು ಅವಕಾಶ ಕಲ್ಪಿಸಲಾಗಿದೆ.
ವಿಕಲಚೇತನರ ರಿಯಾಯಿತಿ ಬಸ್ಸು ಪಾಸುಗಳನ್ನು ಫಲಾನುಭವಿಗಳು ಬಂದು ನವೀಕರಿಸಿಕೊಳ್ಳಲು ಅನುಕೂಲವಾಗುವಂತೆ 2024ನೇ ಸಾಲಿನಲ್ಲಿ ವಿತರಿಸಿದ ಪಾಸುಗಳನ್ನು 2025ರ ಫೆಬ್ರವರಿ 28ರವರೆಗೆ ಮಾನ್ಯ ಮಾಡಲಾಗುವುದು ಎಂದು ಮಂಗಳೂರು ಕ.ರಾ.ರ.ಸಾ. ನಿಗಮದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.