ಸರಕಾರಿ ಶಾಲೆಗೆ ನುಗ್ಗಿ ಕಳವು
Update: 2024-12-31 14:25 GMT
ಕಾರ್ಕಳ, ಡಿ.31: ಕೆರ್ವಾಸೆ ಗ್ರಾಮದ ಬಂಗ್ಲೆಗುಡ್ಡೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಡಿ.30ರಂದು ರಾತ್ರಿ ವೇಳೆ ನುಗ್ಗಿದ ಕಳ್ಳರು ಸಾವಿರಾರು ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.
ಶಾಲಾ ಕಛೇರಿಯ ಬೀಗ ಮುರಿದು ಒಳಪ್ರವೇಶಿಸಿದ ಕಳ್ಳರು, 38,000ರೂ. ಮೌಲ್ಯದ ಲ್ಯಾಪ್‌ಟಾಪ್ ಹಾಗೂ ಮೇಜಿನ ಡ್ರಾವರ್‌ನಲ್ಲಿದ್ದ ಶಾಲೆಗೆ ಸಂಬಂಧಿಸಿದ ಸುಮಾರು 1,700ರೂ. ಹಣವನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.