ಫೆಲೋಶಿಪ್: ಅರ್ಜಿ ಆಹ್ವಾನ
ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್‌ಡಿ ಅಧ್ಯಯನ ಪ್ರಾರಂಭಿಸಿರುವ (2024ರ ಜನವರಿ 10ರ ನಂತರ ಪ್ರಥಮ ವರ್ಷದ ಪಿಎಚ್‌ಡಿ ಪ್ರಾರಂಭಿಸಿರಬೇಕು) ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ ೩ಬಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್‌ಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ/ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಎಚ್‌ಡಿ ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಜನವರಿ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗೆ ಇಲಾಖಾ - https://bcwd.karnataka.gov.in- ವೆಬ್‌ಸೈಟ್ ಅಥವಾ ದೂ.ಸಂಖ್ಯೆ: 8050770004ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.