ಕುಂದಾಪುರದಲ್ಲಿ ಕಿಶೋರ ಯಕ್ಷಗಾನ ಸಂಭ್ರಮ ಉದ್ಘಾಟನೆ

Update: 2025-01-02 15:26 GMT

ಉಡುಪಿ, ಜ.2: ಕುಂದಾಪುರ ವಿಧಾನಸಭಾ ಕ್ಷೇತ್ರದ 6 ಪ್ರೌಢಶಾಲೆಗಳ ಕಿಶೋರ ಯಕ್ಷಗಾನ ಸಂಭ್ರಮವನ್ನು ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಬುಧವಾರ ಸಂಜೆ ಉದ್ಘಾಟಿಸಿದರು.

ಕುಂದಾಪುರ ಶಾಸಕ ಕಿರಣ್‌ಕುಮಾರ್ ಕೊಡ್ಗಿ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕುಂದಾಪುರ ಉಪವಿಭಾಗ ಅಧಿಕಾರಿ ಮಹೇಶ್ಚಂದ್ರ ಕೆ., ಕುಂದಾಪುರ ಪುರಸಭೆಯ ಅಧ್ಯಕ್ಷ ಮೋಹನ್‌ದಾಸ್ ಶೆಣೈ, ಕುಂದಾಪುರ ಆದರ್ಶ ಆಸ್ಪತ್ರೆ ಆಡಳಿತ ನಿರ್ದೇಶಕ ಡಾ.ಆದರ್ಶ ಹೆಬ್ಬಾರ್, ಕಾವ್ರಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಸದಾನಂದ ಬಳ್ಕೂರು, ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಕಷ್ಣ ಭಾಗವಹಿಸಿದ್ದರು.

ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರೆ ಯಕ್ಷಶಿಕ್ಷಣ ಟ್ರಸ್ಟಿನ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತು ಗಳನ್ನಾಡಿದರು. ನಾರಾಯಣ ಎಂ. ಹೆಗಡೆ ವಂದಿಸಿದರು.

ಸಭಾ ಕಾರ್ಯಕ್ರಮಕ್ಕೆ ಮೊದಲು ಕೆದೂರಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ನರಸಿಂಹ ತುಂಗರ ನಿರ್ದೇಶನದಲ್ಲಿ ಲವಣಾಸುರ ಕಾಳಗ ಯಕ್ಷಗಾನ ಪ್ರದರ್ಶಿಸಿದರೆ, ಕೊನೆಯಲ್ಲಿ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳು ದೇವರಾಜ ದಾಸ ಮರವಂತೆ ನಿರ್ದೇಶನದಲ್ಲಿ ಮೈಂದದ್ವಿವಿದ ಪ್ರಸಂಗವನ್ನು ಪ್ರದರ್ಶಿಸಿದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News