ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮೃತ್ಯು

Update: 2025-01-02 15:33 GMT

ಮಣಿಪಾಲ, ಜ.2: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಉಸಿರಾಟದ ತೊಂದರೆಯಿಂದ ಮೃತಪಟ್ಟ ಘಟನೆ ಜ.1ರಂದು ಬೆಳಗ್ಗೆ ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ಮೃತರನ್ನು ಕೇರಳದ ಲಲಿತಾ (59) ಎಂದು ಗುರುತಿಸಲಾಗಿದೆ. ಇವರು ತಮ್ಮ ಮಗ, ಸೊಸೆ ಹಾಗೂ ಮೊಮ್ಮಗನೊಂದಿಗೆ ಮುಂಬೈಯಿಂದ ಎರ್ನಾಕುಲಂಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು.

ಈ ವೇಳೆ ಇವರಿಗೆ ಉಸಿರಾಟದ ತೊಂದರೆ ಉಂಟಾಗಿದ್ದು ಕೂಡಲೇ ಅವರನ್ನು ಚಿಕಿತ್ಸೆಗಾಗಿ ಇಂದ್ರಾಳಿ ರೈಲು ನಿಲ್ದಾಣದಿಂದ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಪರಿಕ್ಷೀಸಿದ ವೈದ್ಯರು ಲಲಿತಾ ಮೃತಪಟ್ಟಿರುವುದಾಗಿ ತಿಳಿಸಿದರು. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News