ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ
ಬ್ರಹ್ಮಾವರ, ಜ.2: ತಂದೆಯ ಮರಣ ವಿಚಾರದಲ್ಲಿ ಮನನೊಂದ ಚೇರ್ಕಾಡಿ ಗ್ರಾಮದ ರಾಧಾ ಎಂಬವರ ಮಗಳು ಗೀತಾ (39) ಎಂಬವರು ಜ.1ರಂದು ಸಂಜೆ ವೇಳೆ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ: ಬೈಕ್ ಅಪಘಾತದಿಂದ ಕಾಲಿನ ಮೂಳೆ ಮುರಿತಕ್ಕೆ ಒಳಗಾಗಿ ಕೆಲಸಕ್ಕೆ ಹೋಗದೇ ಮನೆಯಲ್ಲಿಯೇ ಇದ್ದ ಕುಂಭಾಶಿ ಜನಾತಾ ಕಾಲೋನಿಯ ಕೃಷ್ಣ ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜ.2ರಂದು ಬೆಳಗ್ಗೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಪು: ಮದ್ಯ ಸೇವನೆ ಚಟವನ್ನು ಹೊಂದಿದ್ದ ರಿಕ್ಷಾ ಚಾಲಕ ಕಟಪಾಡಿ ಪಳ್ಳಿಗುಡ್ಡೆಯ ದೀಪಕ್ ಆರ್.(34) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜ.1ರಂದು ರಾತ್ರಿ ರೂಂನ ಟಾರಸಿಯ ಕಬ್ಬೀಣದ ಹುಕ್ಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.