ಉಡುಪಿ ಜಿಲ್ಲಾ ಕಸಾಪದಿಂದ ‘ಆಗು-ನೀ-ಅನಿಕೇತನ’
ಉಡುಪಿ, ಜ.2: ಕನ್ನಡ ಸಾಹಿತ್ಯ ಪರಿಷತ್ತಿನ ಉಡುಪಿ ಜಿಲ್ಲಾ ಘಟಕ ಜಿಲ್ಲೆಯಲ್ಲಿರುವ ಕನ್ನಡೇತರರಿಗೆ ಕನ್ನಡ ಭಾಷಾ ಪರಿಚಯ ಹಾಗೂ ಸಂವಹನದ ಪ್ರಾಥಮಿಕ ಪರಿಚಯವನ್ನು ಮಾಡಿಕೊಡುವ ದೃಷ್ಟಿಯಿಂದ ‘ಆಗು-ನೀ- ಅನಿಕೇತನ’ ಎಂಬ ಶೀರ್ಘಿಕೆಯಡಿಯಲ್ಲಿ ನಿರಂತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ತಿಳಿಸಿದ್ದಾರೆ.
ಈ ಸರಣಿಯ ಮೊದಲ ಹಂತದ ಕಾರ್ಯಕ್ರಮವನ್ನು ಉದ್ಯಾವರ ಕುತ್ಪಾಡಿಯಲ್ಲಿರುವ ಧರ್ಮಸ್ಥಳ ಶ್ರೀಮಂಜುನಾಥೇಶ್ವರ ಆಯುರ್ವೇದ ಕಾಲೇಜಿನ ಕನ್ನಡೇತರ ವಿದ್ಯಾರ್ಥಿಗಳಿಗೆ ಕನ್ನಡ ಪರಿಚಯಿಸುವ ಕಾರ್ಯಕ್ರಮ ಪ್ರಾರಂಭಿಸಲಿದೆ.
ಈ ಕಾರ್ಯಕ್ರಮದ ಉದ್ಘಾಟನೆ ಜ.4ರ ಶನಿವಾರ ಸಂಜೆ 4 ಗಂಟೆಗೆ ಎಸ್‌ಡಿಎಂ ಆಯುರ್ವೇದ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್.ಕಾರ್ಯಕ್ರಮವನ್ನು ಉದ್ಘಾಟಿಸಲಿ ದ್ದಾರೆ. ಸಂಪನ್ಮೂಲ ವ್ಯಕ್ತಿಯಾಗಿ ಡಾ.ಗಣನಾಥ ಎಕ್ಕಾರು ಹಾಗೂ ಶಾಲಿಕಾ ಎಕ್ಕಾರು ಕಾರ್ಯನಿರ್ವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.