ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಸಭೆ
ಉಡುಪಿ, ಜ.3: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಸಮಿತಿ ಸಭೆಯು ಭಜನಾ ಪರಿಷತ್ ತಾಲೂಕು ಅಧ್ಯಕ್ಷ ವಿಜಯ ಶೆಟ್ಟಿ ಕೊಂಡಾಡಿ ಅಧ್ಯಕ್ಷತೆಯಲ್ಲಿ ಉಡುಪಿಯ ಪುತ್ತಿಗೆ ಮಠದಲ್ಲಿ ಇಂದು ನಡೆಯಿತು.
ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತಿನ ಭಜನಾ ತರಬೇತುದಾರೆ ವಿದುಷಿ ಉಷಾ ಹೆಬ್ಬಾರ್ ಮಾತನಾಡಿ, ಜ.29ರಂದು ಪರ್ಯಾಯ ಪುತ್ತಿಗೆ ಮಠ ಶ್ರೀಕೃಷ್ಣ ಮಠದ ಆಶ್ರಯದಲ್ಲಿ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಮಧ್ಯಾಹ್ನ ಗಂಟೆ 3.30ರಿಂದ ’ದಾಸ ಶ್ರೇಷ್ಠ ಶ್ರೀ ಪುರಂದರ ದಾಸರ ಆರಾಧನಾ ಮಹೋತ್ಸವದ ಅಂಗವಾಗಿ ಉಡುಪಿ ರಾಜಾಂಗಣದಲ್ಲಿ ನಡೆಯಲಿರುವ ’ಸಹಸ್ರ ಕಂಠ ಗಾಯನ’ ಕಾರ್ಯಕ್ರಮದ ಕುರಿತು ವಿಸ್ತೃತ ಮಾಹಿತಿ ನೀಡಿದರು.
ಭಜನಾ ಪರಿಷತ್ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬಸ್ರೂರು ಮಾತನಾಡಿದರು. ಸಭೆಯಲ್ಲಿ ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಉಡುಪಿ ಜಿಲ್ಲಾ ಯೋಜನಾಧಿಕಾರಿ ಸ್ವಪ್ನಾ ಪ್ರಕಾಶ್, ಭಜನಾ ಪರಿಷತ್ ಉಡುಪಿ ಜಿಲ್ಲಾ ಸಮನ್ವಯಾಧಿಕಾರಿ ರಾಘವೇಂದ್ರ ಮುದ್ರಾಡಿ, ಪುತ್ತಿಗೆ ಮಠದ ರಘುಪತಿ ರಾವ್ ಕಿದಿಯೂರು, ಭಜನಾ ಮಂಡಳಿಯ ಸುಮನ ಆಚಾರ್ಯ ಉಪಸ್ಥಿತರಿದ್ದರು.
ತಾಲೂಕು ಭಜನಾ ಪರಿಷತ್ ಉಪಾಧ್ಯಕ್ಷೆ ಸುಮಿತ್ರಾ ನಾಯ್ಕ್ ಪೆರಂಪಳ್ಳಿ ವಂದಿಸಿದರು. ಭಜನಾ ಪರಿಷತ್ ಉಡುಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.