ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ ತರಬೇತಿ

Update: 2025-01-03 14:29 GMT

ಉಡುಪಿ, ಜ.3: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕ.ರಾ.ಮು. ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಎಸ್‌ಬಿಐ ಮತ್ತು ಇತರ ಬ್ಯಾಂಕಿಂಗ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನಡೆಸುವ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ನೀಡಲಾಗುವುದು.

ಆಸಕ್ತರು ಜನವರಿ 8ರ ಒಳಗೆ ಬೆಳಗ್ಗೆ 10:00ಗಂಟೆಯಿಂದ ಸಂಜೆ 4:00 ಗಂಟೆಯವರೆಗೆ ದೂ.ಸಂಖ್ಯೆ: 0821-2515944ಗೆ ಕರೆ ಮಾಡಿ, ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು ಎಂದು ಉಡುಪಿ ಪ್ರಾದೇಶಿಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News